ಕುದ್ಮಲ್ ರಂಗರಾವ್ ಸ್ಮಾರಕವನ್ನು ಪ್ರವಾಸಿತಾಣವಾಗಿಸಲು ಸರ್ಕಾರಕ್ಕೆ ಮನವಿ ಮಾಡುತ್ತೇನೆ: ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ರಂಜೀತ್ ರೈ - Mahanayaka
2:58 AM Wednesday 27 - August 2025

ಕುದ್ಮಲ್ ರಂಗರಾವ್ ಸ್ಮಾರಕವನ್ನು ಪ್ರವಾಸಿತಾಣವಾಗಿಸಲು ಸರ್ಕಾರಕ್ಕೆ ಮನವಿ ಮಾಡುತ್ತೇನೆ: ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ರಂಜೀತ್ ರೈ

ranjith rai
10/07/2024


Provided by

ಮಂಗಳೂರು: ಕುದ್ಮಲ್ ರಂಗರಾವ್ ಸ್ಮಾರಕಕ್ಕೆ  ದಕ್ಷಿಣಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ರಂಜೀತ್ ರೈ ಮೇನಾಲ ಭೇಟಿ ನೀಡಿದರು.

ಇದೇ ವೇಳೆ ಮಾತನಾಡಿದ ಅವರು, ಕುದ್ಮಲ್ ರಂಗರಾವ್ ಸ್ಮಾರಕವನ್ನು ಪ್ರವಾಸಿ ತಾಣವನ್ನಾಗಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಪ್ರಗತಿಗೆ ವಿದ್ಯೆಯೇ ಮೂಲ’ ಎಂದು ನಂಬಿದ್ದ ಕುದ್ಮಲ್ ರಂಗರಾವ್ ಶೋಷಿತ ವರ್ಗದ ಸಮುದಾಯದ ಮಕ್ಕಳಿಗೆ ವಿದ್ಯೆ ನೀಡುವ ಕುರಿತು ಚಿಂತಿಸಿದರು.  ರಂಗರಾವ್‌ ಅವರು ಡಿ.ಸಿ.ಎಂ. ಎಂಬ ಸಂಸ್ಥೆಯನ್ನು ಸ್ಥಾಪಿಸಿ ಮಂಗಳೂರಿನ ಕಂಕನಾಡಿ, ಮೂಲ್ಕಿ, ಬೋಳೂರು, ಉಡುಪಿ, ಬನ್ನಂಜೆ, ನೇಜಾರು, ಅತ್ತಾವರ, ಬಾಬುಗುಡ್ಡೆ, ದಡ್ಡಲ್ ಕಾಡುಗಳಲ್ಲಿ ಉಚಿತ ಶಾಲೆಗಳನ್ನು ತೆರೆದರು. ಆ ಶಾಲೆಗಳನ್ನು ‘ಪಂಚಮ ಶಾಲೆ’ಗಳೆಂದು ಕರೆಯುತ್ತಿದ್ದರು ಎಂದು ಅವರು ತಿಳಿಸಿದರು.

ದಲಿತರಿಗೆ ವೃತ್ತಿಪರ ಶಿಕ್ಷಣ ನೀಡಲು ಶೇಡಿಗುಡ್ಡೆ ಎಂಬಲ್ಲಿ ಕೈಗಾರಿಕಾ ತರಬೇತಿ ಶಾಲೆ ಪ್ರಾರಂಭಿಸಿದರು. ತಾವು ಸ್ಥಾಪಿಸಿದ ಡಿ.ಸಿ.ಎಂ. ಮಿಶನ್ ಶಾಲೆಗಳಲ್ಲಿ ಮತ್ತು ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ಬಡಗಿ, ನೇಯ್ಕೆ ತೋಟಗಾರಿಕೆ, ಕಸೂತಿ, ರೇಷ್ಮೆ ಹುಳು ಸಾಕಾಣಿಕೆ ಇತ್ಯಾದಿ ವೃತ್ತಿಗಳನ್ನು ಅವಲಂಬಿಸಲು ಅಗತ್ಯವಾದ ತರಬೇತಿಯನ್ನು ದಲಿತರಿಗೆ ಕೊಡಿಸಿ,  ಸ್ವಾವಲಂಬಿ ಜೀವನಕ್ಕೆ ದಾರಿ ತೋರಿದರು ಎಂದರು.

ಅನ್ಯರ ಅನ್ನಕ್ಕಿಂತ ಆತ್ಮಗೌರವದ ಗಂಜಿ ಊಟವೇ ದೊಡ್ಡದೆಂದು ತೋರಿಸಿಕೊಟ್ಟರು. ಇಂತಹ ಮಹಾನ್ ವ್ಯಕ್ತಿಗಳ ಇತಿಹಾಸ ಪುಟದಲ್ಲಿ ಶಾಶ್ವತವಾಗಿ ಉಳಿಯ ಬೇಕು ಈಗ ನಮ್ಮದೇ ರಾಜ್ಯ ಸರಕಾರ ಇರುವ ಕಾರಣ, ನಮ್ಮ ನಾಯಕರಿಗೆ ಮತ್ತು ಮಂತ್ರಿಗಳಿಗೆ ತಿಳಿಸಿ ಈ ಜಾಗವನ್ನು ಉನ್ನತ ಪ್ರವಾಸಿ ಸ್ಮಾರಕ ತಾಣವಾಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಂಜೀತ್ ರೈ ತಿಳಿಸಿದರು. ಈ ಸಂದರ್ಭದಲ್ಲಿ ಸೌಕತ್ ಆಲಿ ಮೇನಾಲ ಜೊತೆಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ