ಅಯೋಧ್ಯೆ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮಕ್ಕೆ ಬರದಂತೆ ಅಡ್ವಾಣಿ, ಜೋಷಿಗೆ ಮನವಿ!

19/12/2023
ಅಯೋಧ್ಯೆ: ರಾಮ ಮಂದಿರ ಹೋರಾಟದ ಮುಂಚೂಣಿಯಲ್ಲಿದ್ದ ಬಿಜೆಪಿ ವರಿಷ್ಠ ಎಲ್.ಕೆ.ಅಡ್ವಾಣಿ ಹಾಗೂ ಮುರಳೀಮನೋಹರ್ ಜೋಷಿ ಅವರು, ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ರಾಮ ಮಂದಿರ ಟ್ರಸ್ಟ್ ಸೋಮವಾರ ತಿಳಿಸಿದೆ.
ವಯಸ್ಸು ಹಾಗೂ ಆರೋಗ್ಯದ ಕಾರಣಗಳಿಂದಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಈ ಇಬ್ಬರು ಹಿರಿಯರನ್ನು ಕೋರಿರುವುದಾಗಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಅಡ್ವಾಣಿ ಅವರಿಗೆ 96 ವರ್ಷ, ಜೋಷಿ ಅವರಿಗೆ ಮುಂದಿನ ತಿಂಗಳಿಗೆ 90 ವರ್ಷ ತುಂಬುತ್ತವೆ ಹೀಗಾಗಿ ಅವರನ್ನು ಪಾಲ್ಗೊಳ್ಳದಂತೆ ಕೋರಲಾಗಿದ್ದು, ಇದಕ್ಕೆ ಅವರು ಸಮ್ಮತಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.