ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ

07/02/2024
ಗುಜರಾತ್: ಕೊಳವೆ ಬಾವಿಗೆ ಬಿದ್ದಿದ್ದ ಗುಜರಾತ್ ನ ಜಾಮ್ ನಗರ ಜಿಲ್ಲೆಯ ಗೋವಾನಾ ಗ್ರಾಮದ 2 ವರ್ಷದ ಬಾಲಕನನ್ನು ರಕ್ಷಿಸಲಾಗಿದೆ.
ಮಂಗಳವಾರ ಸಂಜೆ 6: 30ರ ವೇಳೆ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಬುಧವಾರ ಮುಂಜಾನೆ 4 ಗಂಟೆಯ ವೇಳೆಗೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊಳವೆ ಬಾವಿಯಿಂದ ಹೊರ ತೆಗೆದ ಬಳಿಕ ಬಾಲಕನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ತಿಂಗಳು ಜಿಲ್ಲೆಯ ದ್ವಾರಕ ನಗರದಲ್ಲಿ ಇಂತಹದ್ದೆ ಘಟನೆ ನಡೆದಿದ್ದು, ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಳು.