ಕೆರೆ ಕೋಡಿ ನೀರು ಹರಿಯುವ ಬಳಿ ಕಾಲು ಜಾರಿ ಕೊಚ್ಚಿ ಹೋದ ಯುವತಿ ಬದುಕಿ ಬಂದಿದ್ದೇ ಅಚ್ಚರಿ!
ತುಮಕೂರು : ಸೆಲ್ಪಿ ಪೋಟೋ ತೆಗೆದುಕೊಳ್ಳಲು ಕೆರೆ ಕೋಡಿ ನೀರು ಹರಿಯುವ ಬಳಿ ಕಾಲು ಜಾರಿ ಕಲ್ಲಿನ ಪೊಟರೆಯೊಳಗೆ ಸಿಲುಕಿಕೊಂಡಿದ್ದ ಯುವತಿಯು ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಬದುಕುಳಿದಿರೋ ಘಟನೆ ತುಮಕೂರಿನಲ್ಲಿ ನಡೆದಿದೆ.
ಸತತ 12 ಗಂಟೆಗಳ ಕಾರ್ಯಾಚರಣೆ ಬಳಿಕ ಬದುಕುಳಿದ ಯುವತಿ ಹಂಸ (19), ಸಾವನ್ನು ಗೆದ್ದು ಬಂದಿದ್ದಾಳೆ. ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ಈ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ, ನಿನ್ನೆ ರಜೆ ಹಿನ್ನೆಲೆ ಸ್ನೇಹಿತರ ಜೊತೆ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು.
ಈ ವೇಳೆ ಅಲ್ಲೆ ಸಮೀಪದಲ್ಲಿರುವ ಮೈದಾಳ ಕೆರೆ ತುಂಬಿ ಕೋಡಿ ಬಿದ್ದಿತ್ತು ಅದನ್ನ ನೋಡಲು ತೆರಳಿದ್ದ ಯುವತಿ, ಕೆರೆ ಕೋಡಿ ನೀರು ಹರಿಯುವ ಸ್ಥಳದಲ್ಲಿ ನಿಂತು ಸೆಲ್ಪಿ ಪೋಟೋ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಬಿದ್ದು ಕಲ್ಲಿನ ಪೊಟರೆಯೊಳಗೆ ಸಿಲುಕಿಕೊಂಡಿದ್ದಳು.
ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ನಿನ್ನೆ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು.
ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವತಿಯ ಹುಡುಕಾಟಕ್ಕೆ ಕಾರ್ಯಾಚರಣೆ ನಡೆದಿತ್ತು. ಕೆರೆ ಕೋಡಿ ನೀರನ್ನ ಬೇರೆಡೆಗೆ ಡೈವರ್ಟ್ ಮಾಡಿ ಕಾರ್ಯಾಚರಣೆ ಆರಂಭಿಸಿದ ಅಗ್ನಿಶಾಮಕ ದಳ ಸಿಬ್ಬಂದಿ. ಸತತ ಕಾರ್ಯಾಚರಣೆಯಿಂದ ಸಾವನ್ನೆ ಗೆದ್ದು ಬಂದ ಯುವತಿಯಾಗಿದ್ದಾಳೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: