ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವನೆಯನ್ನು ತಪ್ಪಾಗಿ ಗ್ರಹಿಸಲಾಗಿದೆ: ಡಾ.ಜಿ.ಪರಮೇಶ್ವರ್
ಬೆಂಗಳೂರು: ಮುಸ್ಲಿಂ ಸಮುದಾಯದ ಕೆಲ ಶಾಸಕರು ಮತ್ತು ಮುಖಂಡರು ಕಾಮಗಾರಿಗಳಲ್ಲಿ ಶೇ. 4ರಷ್ಟು ಮೀಸಲಾತಿ ನೀಡುವಂತೆ ಮನವಿ ಮಾಡಿದ್ದಾರೆ.
ಮನವಿಯನ್ನು ಪರಿಶೀಲಿಸುವಂತೆ ಸಿಎಂ ತಿಳಿಸಿದ್ದಾರೆ ಅಷ್ಟೇ, ಇದನ್ನು ತಪ್ಪು ಗ್ರಹಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬುಧವಾರ ಮಾತನಾಡಿದ ಅವರು, ಕಾಮಗಾರಿಗಳಲ್ಲಿ ಶೇ. 4ರಷ್ಟು ಮೀಸಲಾತಿ ನೀಡುವಂತೆ ಮನವಿಯನ್ನು ಇಲಾಖೆಯು ಪರಿಶೀಲಿಸಿದ ಬಳಿಕ ಪ್ರಸ್ತಾವನೆಯು ಸಚಿವ ಸಂಪುಟದ ಮುಂದೆ ತರಬೇಕು. ಕ್ಯಾಬಿನೆಟ್ ನಲ್ಲಿ ತೀರ್ಮಾನ ಆದ ಬಳಿಕ ಸರ್ಕಾರಿ ಆದೇಶ ಆಗಬೇಕಾಗುತ್ತದೆ. ಈವರೆಗೂ ಕ್ಯಾಬಿನೆಟ್ ಮುಂದೆ ಪ್ರಸ್ತಾವನೆ ಬಂದಿಲ್ಲ.ಇದನ್ನು ತಪ್ಪು ಗ್ರಹಿಕೆ ಮಾಡಲಾಗಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಯಾವುದೇ ಸಮುದಾಯವನ್ನು ತುಷ್ಟಿಕರಣ ಮಾಡುವಂತಹ ಅಗತ್ಯವಿಲ್ಲ. ಯಾವುದೇ ಸಮುದಾಯ, ಧರ್ಮದ ಬಡವರ ಅಭಿವೃದ್ಧಿಗೆ ಒತ್ತು ನೀಡುವುದು ಸರ್ಕಾರದ ಕರ್ತವ್ಯ. ಒಂದಷ್ಟು ಸವಲತ್ತು ಕಲ್ಪಿಸಿದರೆ ಅದನ್ನು ತುಷ್ಟೀಕರಣ ಎನ್ನುವುದು ಸರಿಯಲ್ಲ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: