ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ

om prakash
22/04/2025

ಬೆಂಗಳೂರು: ರಾಜ್ಯದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಕೊಲೆ ಆರೋಪಿ ಪಲ್ಲವಿಯನ್ನು ಪೊಲೀಸರು ಸೋಮವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

ಇದರಂತೆ ಮೇ 3ರ ವರೆಗೆ ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆರೋಪಿ ಪಲ್ಲವಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನ ಕಡೆಗೆ ಪೊಲೀಸರು ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಓಂ ಪ್ರಕಾಶ್ ಅವರ ಪುತ್ರಿ ಕೃತಿಯನ್ನು ಪರೀಕ್ಷೆಗಾಗಿ ನಿಮ್ಹಾನ್ಸ್’ಗೆ ಸ್ಥಳಾಂತರ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ವಿಚಾರಣೆಯ ಸಮಯದಲ್ಲಿ, ಪಲ್ಲವಿ ತಮ್ಮ ಪತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದು, ಪತಿ ತನ್ನನ್ನು ಮತ್ತು ತನ್ನ ಮಗಳನ್ನು ಕೊಲ್ಲುತ್ತಾನೆಂದು ತಿಳಿದು ಬಂದಿತ್ತು. ಹೀಗಾಗಿ ಹತ್ಯೆ ಮಾಡಲು ನಿರ್ಧರಿಸಿದ್ದೆ ಎಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version