ಮೂಡಬಿದ್ರೆಯ‌ ನಿವಾಸಿ  ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕ - Mahanayaka
1:14 PM Wednesday 3 - September 2025

ಮೂಡಬಿದ್ರೆಯ‌ ನಿವಾಸಿ  ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕ

s abdul nazir
12/02/2023


Provided by

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ‌ ನಿವಾಸಿ, ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ನೂತನ ರಾಜ್ಯಪಾಲರನ್ನಾಗಿ ರಾಷ್ಟ್ರಪತಿಯವರು ನೇಮಕ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಅಬ್ದುಲ್ ನಜೀರ್ ಸುಪ್ರೀಂಕೋರ್ಟ್ ಜಡ್ಜ್ ಆಗಿ ನೇಮಕವಾದ ಬಳಿಕ ಕೆಲ ಐತಿಹಾಸಿಕ ಮಹತ್ವದ ಪ್ರಕರಣಗಳ ತೀರ್ಪು ನೀಡಿದ ನ್ಯಾಯಪೀಠಗಳಲ್ಲಿ ಭಾಗಿಯಾಗಿದ್ದರು.

ತ್ರಿವಳಿ ತಲಾಖ್, ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದಲ್ಲಿ ತೀರ್ಪು ನೀಡಿದ್ದ ಸರ್ವೋಚ್ಚ ನ್ಯಾಯಪೀಠದಲ್ಲೂ ಇವರು ಇದ್ದರು. ಇದೇ ಜ.14 ರಂದು ಇವರು ನಿವೃತ್ತರಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದಲ್ಲಿ ಹುಟ್ಟಿದ ಎಸ್. ಅಬ್ದುಲ್ ನಜೀರ್ ಮಹಾವೀರ ಕಾಲೇಜಿನಲ್ಲಿ ಬಿಕಾಂ ಮತ್ತು ಎಸ್​ಡಿಎಂ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದಿದ್ದರು.

ಇವರೊಂದಿಗೆ 12 ಜನ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ