ಮಂಗಳೂರು: ಆಸ್ತಿ ತೆರಿಗೆಯನ್ನು ಪರಿಷ್ಕರಣೆ | ಹೊಸ ಆದೇಶವನ್ನು ಮರು ಪರಿಶೀಲಿಸಲು ಆದೇಶ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಲು ಹೊಸ ಆದೇಶವನ್ನು ಮರು ಪರಿಶೀಲಿಸಲು ಆದೇಶ ನೀಡಲಾಗಿದೆ ಎಂದು ಮಂಗಳೂರು ನಗರದ ಪಾಲಿಕೆ ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ.
ಲಾಲ್ ಬಾಗ್ ನಲ್ಲಿರೋ ಪಾಲಿಕೆ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020–23 ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದಿರುವ ದೂರು ಹಾಗೂ ಈ ಬಗ್ಗೆ ಹಿಂದಿನ ಮನಪಾ ಸಭೆಯಲ್ಲಿ ಸದಸ್ಯರು ವಿರೋಧ ವ್ಯಕ್ತ ಪಡಿಸಿರುವ ಹಿನ್ನೆಲೆಯಲ್ಲಿ ಮಾ.20ರಂದು ಮಹಾನಗರ ಪಾಲಿಕೆ ಮೇಯರ್ ಆದೇಶದಲ್ಲಿ ಪರಿಷ್ಕರಣೆ ಮಾಡಲು ಆದೇಶ ನೀಡಲಾಗಿದೆ ಎಂದು ಜಯಾನಂದ ತಿಳಿಸಿದ್ದಾರೆ.
ಆದ್ದರಿಂದ ಈಗಾಗಲೇ ತೆರಿಗೆ ಪಾವತಿಸಿದವರಿಗೆ ಮುಂದಿನ ವರ್ಷ ತೆರಿಗೆ ಪಾವತಿಸುವ ಸಂದರ್ಭದಲ್ಲಿ ಮರು ಹೊಂದಾಣಿಕೆ ಮಾಡಲು ಅವಕಾಶವಿರುತ್ತದೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw