ಕಾಂಗ್ರೆಸ್‌ ನ ಭಾರತ್  ಜೋಡೋ ಯಾತ್ರೆಯ ಪ್ರತಿಫಲ ಈ ಬಾರಿಯ ಕೈ ಗೆಲುವು - Mahanayaka

ಕಾಂಗ್ರೆಸ್‌ ನ ಭಾರತ್  ಜೋಡೋ ಯಾತ್ರೆಯ ಪ್ರತಿಫಲ ಈ ಬಾರಿಯ ಕೈ ಗೆಲುವು

bharath jodo
13/05/2023

ಈ ಬಾರಿಯ ಕರ್ನಾಟಕ ವಿಧಾನಸಭಾ  ಚುನಾವಣೆ ಹಾಗೂ ಮುಂದಿನ ಲೋಕಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ನಡೆದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯು ದೇಶದ ನಾನಾ ರಾಜ್ಯಗಳಲ್ಲಿ ಸಾಗಿದ್ದು, ಕರ್ನಾಟಕದಲ್ಲಿ  ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಯಚೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಗಿದ್ದ ಒಇ ಯಾತ್ರೆ ಈ ಭಾಗದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪ್ರಭಾವ ಬೀರಿದೆ.

ಇನ್ನು 2018ರಲ್ಲಿ ಬಿಜೆಪಿ ಗೆದ್ದಿದ್ದ ಹಲವು ಕ್ಷೇತ್ರಗಳನ್ನು ಈ ಬಾರಿ ಭಾರತ್ ಜೋಡೋ ಯಾತ್ರೆ ಪ್ರಭಾವ ಕಸಿದುಕೊಂಡಿದೆ. ಬಳ್ಳಾರಿ ಸಿಟಿ ಕಳೆದ ಸಲ ಬಿಜೆಪಿ ಗೆದ್ದಿದ್ದರೆ, ಈ ಬಾರಿ ಕಾಂಗ್ರೆಸ್ ಗೆಲುವಿನ ಬಾವುಟ ಹಾರಿಸಿದೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಕಳೆದ ಬಾರಿ ಬಿಜೆಪಿ  ಗೆದ್ದಿತ್ತು. ಈ ಬಾರಿ ಕಾಂಗ್ರೆಸ್ ಆ ಕ್ಷೇತ್ರವನ್ನು ವಶಪಡಿಸಿಕೊಂಡಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಮೊಳಕಾಲ್ಮೂರು ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಗೆಲುವಿನ ನಗೆ ಬೀರಿತ್ತು. ಈ ಬಾರಿ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ‌ ಪಲಾಗಿತ್ತು.ಆದರೆ ಈ ಬಾರಿ ಕಾಂಗ್ರೆಸ್ ಗೆದ್ದಿದೆ.

ಜೋಡೋ ಯಾತ್ರೆ ಪ್ರಭಾವಕ್ಕೆ ಜೆಡಿಎಸ್  ಪಕ್ಷದ ಕೆಲ ಅಭ್ಯರ್ಥಿಗಳು ಕೂಡ ತಲೆಬಾಗಿದ್ದಾರೆ. 2018ರಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆ, ನಾಗಮಂಗಲ, ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಗೆದ್ದು ಬೀಗಿತ್ತು. ಈ ಬಾರಿ ಮೂರು ಕ್ಷೇತ್ರಗಳನ್ನೂ ಕಾಂಗ್ರೆಸ್ ವಶಪಡಿಸಿಕೊಂಡಿದೆ. ಇದಕ್ಕೆ ಭಾರತ್ ಜೋಡೋ ಯಾತ್ರೆಯೂ ಕಾರಣವೆಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಅಲ್ಲದೇ, ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಸಿರಾ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಗೆಲುವು ಸಾಧಿಸಿತ್ತು. ಈ ಬಾರಿ ಎರಡೂ ಕ್ಷೇತ್ರಗಳಲ್ಲೂ ಕೈ ಗೆದ್ದಿದೆ.

ಜೆಡಿಎಸ್ ಮೂರು ಸ್ಥಾನಗಳನ್ನು ಕಳೆದುಕೊಂಡಿದ್ದರೆ, ಬಿಜೆಪಿ ಏಳು ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಕಾಂಗ್ರೆಸ್ ಹತ್ತು ಸ್ಥಾನಗಳನ್ನು ಗೆಲ್ಲುವ ಮೂಲಕ ಅಚ್ಚರಿ ಮೂಡಿಸಿದೆ.ಬಳ್ಳಾರಿ ಕ್ಷೇತ್ರ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರ, ಮೈಸೂರಿನ ನರಸಿಂಹರಾಜ ಹಾಗೂ ವರುಣಾ ಕ್ಷೇತ್ರ, ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ 2018ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಿದ್ದರು. ಈ ಬಾರಿಯೂ ಅವರು ಸಲೀಸಾಗಿ ತಮ್ಮ ಕ್ಷೇತ್ರಗಳನ್ನು ಉಳಿಸಿಕೊಂಡಿದ್ದಾರೆ. ಅಲ್ಲದೇ, ಹೆಚ್ಚಿನ ಅಂತರದಿಂದಲೂ ಅವರೆಲ್ಲ ಗೆಲುವು ಸಾಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ