ರಾಕೇಶ್ ಪೂಜಾರಿ ನಿಧನದ ಬಗ್ಗೆ ರಿಷಬ್ ಶೆಟ್ಟಿ ಭಾವುಕ ನುಡಿ!

ಮಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಇದೇ ಸಂದರ್ಭದಲ್ಲಿ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದು, ಭಾವುಕ ಸಾಲುಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
“ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗು ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ .. ಮತ್ತೆ ಹುಟ್ಟಿ ಬಾ ಗೆಳೆಯ .. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ” ಎಂದು ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ಕೂಡ ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, “ನಟ ರಾಕೇಶ್ ಪೂಜಾರಿ ನಿಧನಕ್ಕೆ ತೀವ್ರ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿ ಕುಟುಂಬಸ್ಥರಿಗೆ, ಅವರ ಆಪ್ತರಿಗೆ ಹಾಗೂ ಹಿತೈಷಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. ಈ ದುಃಖದ ಘಳಿಗೆಯಲ್ಲಿ ನಾವೆಲ್ಲರೂ ಅವರ ಕುಟುಂಬದೊಂದಿಗೆ ಇದ್ದೇವೆ” ಎಂದು ಬರೆದುಕೊಂಡಿದೆ.
ಮೇ 12ರಂದು ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದರು. ಅನುಶ್ರೀ, ರಕ್ಷಿತಾ ಪ್ರೇಮ್, ಯೋಗರಾಜ್ ಭಟ್ ಹಾಗೂ Zee Kannada ಕುಟುಂಬದ ಕಾಮಿಡಿ ಕಿಲಾಡಿಗಳು ಕಲಾವಿದರು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD