ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಚ್ಚರಿಕೆ ಬೆನ್ನಲ್ಲೇ ರಸ್ತೆ ದುರಸ್ತಿ ಆರಂಭ: ನಿಟ್ಟುಸಿರುಬಿಟ್ಟ ಸಾರ್ವಜನಿಕರು
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವೇಶ ದ್ವಾರದಿಂದ ಬಜ್ಪೆಯವರೆಗಿನ ರಾಜ್ಯ ಹೆದ್ದಾರಿಯು ಸಂಪೂರ್ಣವಾಗಿ ಹದಗೆಟ್ಟು, ವಾಹನ ಸವಾರರು ಸಂಚರಿಸಲು ಹರಸಾಹಸ ಪಡುತ್ತಿದ್ದು, ಈ ಹದಗೆಟ್ಟ ರಸ್ತೆಯನ್ನು 15 ದಿನದ ಒಳಗೆ ಸರಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ ದ.ಕ. ಜಿಲ್ಲಾ ಸಮಿತಿ ಹಾಗೂ ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಲೋಕೋಪಯೋಗಿ ಇಲಾಖೆ, ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿತ್ತು. ಇದೀಗ ಈ ಮನವಿಗೆ ಲೋಕೋಪಯೋಗಿ ಇಲಾಖೆ ಸ್ಪಂದಿಸಿದೆ.
ಲೋಕೋಪಯೋಗಿ ಇಲಾಖೆಯು ಹದಗೆಟ್ಟ ರಸ್ತೆಯ ದುರಸ್ತಿ ಕಾರ್ಯವನ್ನು ಆರಂಭಿಸಿದ್ದು, ಸಂಘಟನೆಯ ನ್ಯಾಯಯುತ ಆಗ್ರಹಕ್ಕೆ ಸ್ಪಂದಿಸಿದ ಜನಪ್ರತಿನಿಧಿಗಳು ಹಾಗೂ ಲೋಕೋಪಯೋಗಿ ಇಲಾಖೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಭಿನಂದನೆ ಸಲ್ಲಿಸಿರುವುದಾಗಿ ಜಿಲ್ಲಾ ಸಂಚಾಲಕರಾದ ಸದಾಶಿವ ಪಡುಬಿದ್ರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವೇಶ ದ್ವಾರದಿಂದ ಬಜ್ಪೆಯವರೆಗಿನ ರಾಜ್ಯ ಹೆದ್ದಾರಿಯ ದುಸ್ಥಿತಿಯಿಂದ ಕಂಗಾಲಾಗಿದ್ದ ವಾಹನ ಸವಾರರು ಹಾಗೂ ಸಾರ್ವಜನಿಕರು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಚ್ಚರಿಕೆ ಬೆನ್ನಲ್ಲೇ ರಸ್ತೆ ದುರಸ್ತಿ ಆರಂಭ: ನಿಟ್ಟುಸಿರುಬಿಟ್ಟ ಸಾರ್ವಜನಿಕರು
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























