1:15 AM Sunday 14 - September 2025

ಬೈಕ್ ನಲ್ಲಿ ಸಾಗಿಸುತ್ತಿದ್ದ 1.50 ಕೋಟಿ ಹಣ ದರೋಡೆ: ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿದ ದರೋಡೆಕೋರರು

byke
12/12/2023

ಚಿತ್ರದುರ್ಗ: ಬೈಕ್ ನಲ್ಲಿ 1.50 ಕೋಟಿ ಹಣ ಸಾಗಿಸುತ್ತಿದ್ದ ವೇಳೆ ಬೈಕ್ ನ್ನು ಅಡ್ಡಗಟ್ಟಿದ ದರೋಡೆಕೋರರು ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ , ಹಣ ದರೋಡೆ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಈಚಲನಾಗೇನಹಳ್ಳಿ ಬಳಿ ನಡೆದಿದೆ.

ಅಡಿಕೆ ವ್ಯಾಪಾರಕ್ಕೆ ಸಂಬಂಧಿಸಿದ ಹಣವನ್ನು ಮಹಮ್ಮದ್ ಇರ್ಫಾನ್ ಹಾಗೂ ಝಾಕೀರ್ ಎಂಬವರು ಹೈದರಾಬಾದ್ ನಿಂದ ತಂದು ಊರಿಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಡಿಸೆಂಬರ್ 4ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈಚಲನಾಗೇನಹಳ್ಳಿ ಮಾರ್ಗವಾಗಿ ಹೊಸಹಳ್ಳಿಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಸದ್ಯ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version