10:18 PM Tuesday 18 - November 2025

ನಡು ರಸ್ತೆಯಲ್ಲೇ ನಡೆಯಿತು ದರೋಡೆ: ವಿಡಿಯೋ ನೋಡಿ ಬೆಚ್ಚಿಬಿದ್ದ ಜನರು

dehill
26/06/2023

ನವದೆಹಲಿ: ಚಲಿಸುತ್ತಿದ್ದ ಕ್ಯಾಬ್ ವೊಂದನ್ನು ಅಡ್ಡಗಟ್ಟಿ ಸುತ್ತುವರಿದ ಗ್ಯಾಂಗ್ ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆಸಿದ ಘಟನೆ ದೆಹಲಿಯ ಪ್ರಗತಿ ಮೈದಾನ್ ಸುರಂಗ ರಸ್ತೆಯಲ್ಲಿ ನಡೆದಿದೆ.

ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎರಡು ಬೈಕ್ ನಲ್ಲಿ ಬಂದ ನಾಲ್ವರ ಗ್ಯಾಂಗ್ ಏಕಾಏಕಿ ಕ್ಯಾಬ್ ನ್ನು ಅಡ್ಡಗಟ್ಟಿದ್ದು, ಗನ್ ತೋರಿಸಿ ಬೆದರಿಸಿ, ಕಾರಿನೊಳಗಿದ್ದ ವ್ಯಕ್ತಿಯ ಬ್ಯಾಗ್ ನ್ನು ಕಸಿದುಕೊಂಡು ಕೆಲವೇ ಕ್ಷಣಗಳಲ್ಲಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಶನಿವಾರ ಮಧ್ಯಾಹ್ನ 3ರಿಂದ 4 ಗಂಟೆ ನಡುವೆ ಈ ಘಟನೆ ನಡೆದಿದೆ. ಈ ಸಂಬಂಧ ಕ್ಯಾಬ್ ನಲ್ಲಿದ್ದ ವ್ಯಕ್ತಿ, ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ಆರೋಪಿಗಳು ಈವರೆಗೆ ಪೊಲೀಸರಿಗೆ ಸಿಕ್ಕಿಲ್ಲ.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version