ಚಾರ್ಮಾಡಿ ಘಾಟಿ ಬಳಿ ಬಂಡೆ ಕುಸಿತ: ತಪ್ಪಿದ ಭಾರಿ ಅನಾಹುತ, ವಾಹನ ಸಂಚಾರ ಸುಗಮ
ಮೂಡಿಗೆರೆ: ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಬೃಹತ್ ಬಂಡೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಥವಾ ಅನಾಹುತ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಮಲೆನಾಡು ಭಾಗದಲ್ಲಿ ಸದ್ಯಕ್ಕೆ ಯಾವುದೇ ಭಾರಿ ಮಳೆಯಾಗದಿದ್ದರೂ, ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಘಾಟಿ ಪ್ರದೇಶದಲ್ಲಿ ಭೂಮಿಯ ತೇವಾಂಶ ಗಣನೀಯವಾಗಿ ಹೆಚ್ಚಾಗಿದ್ದು, ಇದೇ ಕಾರಣದಿಂದಾಗಿ ಬಂಡೆ ಕುಸಿದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಂಡೆ ರಸ್ತೆಯ ಬದಿಗೆ ಕುಸಿದಿರುವುದರಿಂದ ವಾಹನ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಸದ್ಯ ಎಂದಿನಂತೆ ವಾಹನಗಳು ಮುಕ್ತವಾಗಿ ಚಲಿಸುತ್ತಿವೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಲೆನಾಡಿನ ವಿವಿಧ ಭಾಗಗಳಲ್ಲಿ ಇಂದಿಗೂ ಆಗಾಗ ಸಾಧಾರಣ ಮಳೆ ಮುಂದುವರಿಯುತ್ತಲೇ ಇರುವುದರಿಂದ, ಘಾಟಿ ಪ್ರದೇಶಗಳಲ್ಲಿ ಸಂಚರಿಸುವಾಗ ಸಾರ್ವಜನಿಕರು ಹಾಗೂ ಚಾಲಕರು ಹೆಚ್ಚಿನ ಜಾಗ್ರತೆ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಮಂಡಳಿ ಸೂಚಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























