ಕುಮಾರಸ್ವಾಮಿ ವಿರುದ್ಧ ಹೇಳಿಕೆ; ರಾಕ್ ಲೈನ್ ವೆಂಕಟೇಶ್ ಮನೆಗೆ ಜೆಡಿಎಸ್ ಕಾರ್ಯಕರ್ತರಿಂದ ಮುತ್ತಿಗೆ - Mahanayaka

ಕುಮಾರಸ್ವಾಮಿ ವಿರುದ್ಧ ಹೇಳಿಕೆ; ರಾಕ್ ಲೈನ್ ವೆಂಕಟೇಶ್ ಮನೆಗೆ ಜೆಡಿಎಸ್ ಕಾರ್ಯಕರ್ತರಿಂದ ಮುತ್ತಿಗೆ

jds
10/07/2021


Provided by

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿ ಅವರನ್ನು ಟೀಕಿಸಿದ್ದ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಜೆಡಿಎಸ್ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮಂಡ್ಯದ ಕೆ ಆರ್ ಎಸ್ ಅಣೆಕಟ್ಟೆ ಸಮೀಪದ‌ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ನಡುವೆ ಹಲವು ದಿನಗಳಿಂದ ವಾಕ್ಸಮರ ನಡೆಯುತ್ತಿದ್ದು, ನಿನ್ನೆ ರಾಕ್ ಲೈನ್ ವೆಂಕಟೇಶ್ ಸುಮಲತಾ ಪರವಾಗಿ ನಿಂತು ಕುಮಾರಸ್ವಾಮಿ ವಿರುದ್ಧ ಕಟು ಟೀಕೆಗಳನ್ನು ಮಾಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು, ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಮುತ್ತಿಗೆ ಹಾಕಲು ಶನಿವಾರ ಬೆಳಿಗ್ಗೆ ಯತ್ನಿಸಿದರು. ವೆಂಕಟೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ಸುಳಿವು ಪಡೆದ ಪೊಲೀಸರು, ವೆಂಕಟೇಶ್ ನಿವಾಸದ ಬಳಿ ಬ್ಯಾರಿಕೇಡ್ ಅಳವಡಿಸಿದ್ದರು. ಸ್ಥಳದಲ್ಲಿ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು, ಬ್ಯಾರಿಕೇಡ್ ಗಳನ್ನು ತಳ್ಳಿಕೊಂಡು ಮನೆಯ ಒಳಕ್ಕೆ ನುಗ್ಗಲು ಯತ್ನಿಸಿದರು.‌ ಹಲವು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ