ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್ ಪ್ರಕರಣ: ಶಿಸ್ತಿನ ಕ್ರಮಕ್ಕೆ ಮುಂದಾದ ಸರ್ಕಾರ - Mahanayaka
6:30 AM Saturday 24 - January 2026

ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್ ಪ್ರಕರಣ: ಶಿಸ್ತಿನ ಕ್ರಮಕ್ಕೆ ಮುಂದಾದ ಸರ್ಕಾರ

d rupa vs rohini sindhuri
21/02/2023

ಬೇಲೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ,  ಸೂಕ್ತ ಸಮಯದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಅರಿವು ಸರ್ಕಾರಕ್ಕಿದೆ. ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೇಲೂರು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯ ಕಾರ್ಯದರ್ಶಿಗಳು ಅಧಿಕಾರಿಗಳಿಗೆ ಲಿಖಿತವಾದ ನಿರ್ದೇಶನಗಳನ್ನು ನೀಡಿದ್ದಾರೆ. ನಿನ್ನೆಯ ದಿನ ಖುದ್ದಾಗಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದಾರೆ. ಅಧಿಕಾರಿಗಳ ನೀತಿ ಸಂಹಿತೆಯ ಪ್ರಕಾರ ಅಧಿಕಾರಿಗಳ ನಡವಳಿಕೆ ಹಾಗೂ ಅದರಂತೆ ನಡೆದುಕೊಳ್ಳದಿದ್ದಾಗ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳಬಹುದಾದ ಶಿಸ್ತಿನ ಕ್ರಮಗಳನ್ನು  ಮುಖ್ಯಕಾರ್ಯದರ್ಶಿಗಳು ತೆಗೆದುಕೊಳ್ಳಲಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ