ಭಾರೀ ಗಾಳಿ, ಮಳೆಗೆ ಹಾರಿದ ಮನೆಯ ಮೇಲ್ಚಾವಣಿ: ಮಕ್ಕಳು ಸ್ವಲ್ಪದರಲ್ಲೇ ಅಪಾಯದಿಂದ ಪಾರು!

mudigere
01/05/2025

ಮೂಡಿಗೆರೆ: ತಾಲ್ಲೂಕಿನ ತ್ರಿಪುರ ಗ್ರಾಮದಲ್ಲಿ ಭಾರೀ ಗಾಳಿ ಮಳೆಗೆ ಮನೆ ಮೇಲ್ಚಾವಣಿ ಹಾರಿ, ಮಕ್ಕಳು ಅಪಾಯದಿಂದ ಪಾರಾದ ಘಟನೆ  ಮೂಡಿಗೆರೆ ತಾಲ್ಲೂಕು, ಬಣಕಲ್ ಹೋಬಳಿಯ ತ್ರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ತ್ರಿಪುರ ಗ್ರಾಮದ ನಿವಾಸಿ ಕುಸುಮಾಕೋಂ ಪದ್ಮ ಪೂಜಾರಿ ಅವರ ಮನೆ ಇಂದು ಮಧ್ಯಾಹ್ನದ ವೇಳೆ ಬೀಸಿದ ತೀವ್ರ ಗಾಳಿ ಮತ್ತು ಮಳೆಗೆ ದೊಡ್ಡ ಪ್ರಮಾಣದ ಹಾನಿಯಾಗಿದೆ.

ಸಿಮೆಂಟ್  ಶೀಟ್‌ ನ ಮೇಲ್ಚಾವಣಿ ಸಂಪೂರ್ಣವಾಗಿ ನೆಲಸಮವಾಗಿ ಬಿದ್ದಿದ್ದು, ಮನೆಯ ಒಳಗಿದ್ದ ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿದ್ದು, ಗಾಯಗೊಂಡ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಕುಟುಂಬಕ್ಕೆ ಸರ್ಕಾರದಿಂದ ನೆರವು ಸಿಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version