ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರೋಷನ್ ಬೇಗ್ ಆರೋಗ್ಯದಲ್ಲಿ ಏರುಪೇರು - Mahanayaka

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರೋಷನ್ ಬೇಗ್ ಆರೋಗ್ಯದಲ್ಲಿ ಏರುಪೇರು

26/11/2020

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಪಟ್ಟಂತೆ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 ಸಿಬಿಐನಿಂದ ಬಂಧಿತರಾಗಿದ್ದ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೋಷನ್ ಬೇಗ್ ಅವರನ್ನು ಸಿಬಿಐ ವಿಚಾರಣೆಗಾಗಿ ಇಂದು ಕಸ್ಟಡಿಗೆ ಪಡೆಯಬೇಕಿತ್ತು. ಇದೇ ಸಂದರ್ಭದಲ್ಲಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಇನ್ನು ಆಸ್ಪತ್ರೆಯಿಂದ ಅವರು ಬಿಡುಗಡೆಯಾಗುವವರೆಗೆ ಸಿಬಿಐ ವಿಚಾರಣೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.


Provided by

ಇತ್ತೀಚಿನ ಸುದ್ದಿ