ಬೆಳ್ಳಂ ಬೆಳಗ್ಗೆ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ದಾಳಿ - Mahanayaka

ಬೆಳ್ಳಂ ಬೆಳಗ್ಗೆ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ದಾಳಿ

23/11/2020

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವಂತ ಸಿಬಿಐ ತನ್ನ ತನಿಖೆಯನ್ನು ಚುರುಕುಗೊಳಿಸಿದೆ . ಇಂದು ಬೆಳ್ಳಂಬೆಳಗ್ಗೆ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ರೇಡ್ ಮಾಡಿದೆ.

ರೋಷನ್ ಬೇಗ್ ಬಂಧನದ ಬೆನ್ನಲ್ಲೇ ಸಿಬಿಐ 7 ಅಧಿಕಾರಿಗಳ ತಂಡ ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೆ ದಾಳಿ ಮಾಡಲಾಗಿದ್ದು, ಸದ್ಯ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಮನ್ಸೂರ್ ಖಾನ್‌ನಿಂದ ಸುಮಾರು 200 ಕೋಟಿ ರೂ. ಗೂ ಹೆಚ್ಚು ಹಣವನ್ನು ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ. ಜೊತೆಗೆ ಐಷಾರಾಮಿ ಕಾರುಗಳೂ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ