ಕುಂಟಿಕಾನದಲ್ಲಿ ಮೀನು ವ್ಯಾಪಾರಿಯ ಕೊಲೆಗೆ ಯತ್ನ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಅರೆಸ್ಟ್ - Mahanayaka

ಕುಂಟಿಕಾನದಲ್ಲಿ ಮೀನು ವ್ಯಾಪಾರಿಯ ಕೊಲೆಗೆ ಯತ್ನ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಅರೆಸ್ಟ್

lokesh kodikere
06/05/2025

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ  ಮೀನು ವ್ಯಾಪಾರಿಯ ಹತ್ಯೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ನಡೆದ ಮರುದಿನ ಮಂಗಳೂರಿನ ವಿವಿಧ ಭಾಗಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಅಂದು ಮುಂಜಾನೆ ಮಂಗಳೂರಿನ ಕುಂಟಿಕಾನದಲ್ಲಿ ಉಳ್ಳಾಲದ ಮೀನು ವ್ಯಾಪಾರಿ ಲುಕ್ಮಾನ್ ಎಂಬವರನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಲಾಗಿತ್ತು.

ಈ ವೇಳೆ ಹಿಂದೂ ಮಹಿಳೆಯೊಬ್ಬರು ಬೊಬ್ಬೆ ಹಾಕಿದಾಗ  ಆರೋಪಿಗಳು ಪರಾರಿಯಾಗಿದ್ದು, ಇದರಿಂದಾಗಿ ಲುಕ್ಮಾನ್ ಅಪಾಯದಿಂದ ಪಾರಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಡಿಕೆರೆ ಲೋಕೇಶ್ ನನ್ನು ಪೊಲೀಸರು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ