ಮಂಗಳೂರು | ರೌಡಿಶೀಟರ್ ಸುಹಾಸ್ ಹತ್ಯೆ ಕೇಸ್: ಮಂಗಳೂರಿನಲ್ಲಿ ಬಸ್ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದೆ. ಇದರ ಬೆನ್ನಲ್ಲೇ ನಗರದಲ್ಲಿ ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿವೆ.
ಮುಂಜಾನೆ ಸರಿಯಾದ ಮಾಹಿತಿ ಇಲ್ಲದ ಕೆಲವರು ಅಂಗಡಿ, ಹೊಟೇಲ್ ಗಳನ್ನು ತೆರೆದಿದ್ದರು. ಆದರೆ ಆ ಬಳಿಕ ಅದನ್ನು ಮುಚ್ಚಿಸಲಾಗಿದೆ ಅಂತ ಹೇಳಲಾಗಿದೆ. ಮಂಗಳೂರಿನಲ್ಲಿ ಬೆರಳೆಣಿಕೆಯ ಖಾಸಗಿ ಬಸ್ ಗಳು ಓಡಾಟ ನಡೆಸುತ್ತಿವೆ. ಬಂದ್ ನ ವಾತಾವರಣ ಸೃಷ್ಟಿಯಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕೂಡ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ. ಕಾನೂನು ಸುವ್ಯವಸ್ಥೆಯ ಎಡಿಜಿಪಿ ಆರ್.ಹಿತೇಂದ್ರ ಮಂಗಳೂರಿಗೆ ಆಗಮಿಸಿ ಪರಿಸ್ಥಿತಿಯನ್ನು ಗಮನಿಸಿದ್ದಾರೆ.
ಕೆಲವೆಡೆಗಳಲ್ಲಿ ಬಸ್ ಗಳಿಗೆ ಕಲ್ಲುತೂರಾಟ ನಡೆದಿದ್ದು, ಯುವಕರಿಗೆ ಹಲ್ಲೆ ನಡೆಸಿರುವ ಘಟನೆಗಳೂ ವರದಿಯಾಗಿವೆ. ಇನ್ನೂ ರಾತ್ರೋ ರಾತ್ರಿ ನಡೆದ ಘಟನೆಗಳಿಂದ ಮಂಗಳೂರಿನಲ್ಲಿ ಏಕಾಏಕಿ ಪರಿಸ್ಥಿತಿ ಬದಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು, ಪ್ರಯಾಣಿಕರು ಸರಿಯಾದ ಸಾರಿಗೆ ವ್ಯವಸ್ಥೆಗಳಿಲ್ಲದೇ ಕಂಗಾಲಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: