6:06 AM Saturday 13 - December 2025

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ

suhas shetty
03/05/2025

ಮಂಗಳೂರು:  ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ, ರಂಜಿತ್, ನಾಗರಾಜ್, ಮೊಹಮ್ಮದ್ ರಿಝ್ವಾನ್ ಮತ್ತು ಆದಿಲ್ ಮೆಹರೂಫ್ ಬಂಧಿತ ಆರೋಪಿಗಳಾಗಿದ್ದಾರೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,  8 ಮಂದಿ ಆರೋಪಿಗಳನ್ನ ಬಂಧಿಸಲಾಗಿದ್ದು, ಯಾವುದೇ ಸಮುದಾಯದವರು ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ ಎಂದು ಅವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಮ್ಯುನಲ್ ಕೃತ್ಯದಲ್ಲಿ ತೊಡಗಿರುವವರನ್ನು ನಿಯಂತ್ರಿಸಲು ಆ್ಯಂಟಿ ಕಮ್ಯನಲ್ ಫೋರ್ಸ್ ರಚಿಸಲಾಗುವುದು. ಕಮ್ಯುನಲ್ ಕೃತ್ಯದಲ್ಲಿ ತೊಡಗುವವರು ಮತ್ತು ಬೆಂಬಲ ನೀಡುವವರ ವಿರುದ್ಧ ಈ ಫೋರ್ಸ್ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಪರಮೇಶ್ವರ್ ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version