ನಾಳೆ ಉಪ ಚುನಾವಣೆ | ಇಂದು ಮುನಿರತ್ನ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್
ಬೆಂಗಳೂರು: ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಇದೇ ಸಂದರ್ಭದಲ್ಲಿ ಇಂದು ಕಾಂಗ್ರೆಸ್ ನಿಯೋಗವು ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ನೀಡಿದ್ದು, ಅವರನ್ನು ಅನರ್ಹಗೊಳಿಸಿ ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ಮುನಿರತ್ನ ಚುನಾವಣೆಯಲ್ಲಿ ಅಕ್ರಮ ನಡೆಸಿದ್ದು, ನಕಲಿ ವೋಟರ್ ಐಡಿ ಸೃಷ್ಟಿಸಿದ್ದಾರೆ ಮತ್ತು ಅವರ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. ಜನಪ್ರತಿನಿಧಿ ಕಾನೂನಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದಾರೆ. ಚುನಾವಣಾ ಅಕ್ರಮದಲ್ಲಿಯೂ ಅವರು ಭಾಗಿಯಾಗಿದ್ದಾರೆ. ಹೀಗಾಗಿ ಅವರನ್ನು ಅನರ್ಹಗೊಳಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಇದ್ದರು.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.