ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ.ಗಳ ದಂಡ: ಪತಂಜಲಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದ್ಯಾಕೆ..?

22/11/2023

ಯೋಗ ಗುರು ರಾಮ್‌ದೇವ್ ರ ಪತಂಜಲಿ ಆಯುರ್ವೇದ ಕಂಪನಿಗೆ ಸುಪ್ರೀಂ ಕೋರ್ಟ್ ತನ್ನ ಔಷಧಿಗಳ ಬಗ್ಗೆ ಜಾಹೀರಾತುಗಳಲ್ಲಿ “ಸುಳ್ಳು” ಮತ್ತು “ದಾರಿತಪ್ಪಿಸುವ” ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದೆ.

“ಪತಂಜಲಿ ಆಯುರ್ವೇದದ ಇಂತಹ ಎಲ್ಲಾ ಸುಳ್ಳು ಮತ್ತು ದಾರಿತಪ್ಪಿಸುವ ಜಾಹೀರಾತುಗಳನ್ನು ತಕ್ಷಣ ನಿಲ್ಲಿಸಬೇಕು. ಅಂತಹ ಯಾವುದೇ ಉಲ್ಲಂಘನೆಯನ್ನು ನ್ಯಾಯಾಲಯವು ಬಹಳ ಗಂಭೀರವಾಗಿ ಪರಿಗಣಿಸುತ್ತದೆ ” ಎಂದು ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮನವಿಯನ್ನು ಆಲಿಸುವಾಗ ಮೌಖಿಕವಾಗಿ ಗಮನಿಸಿದೆ.

ವ್ಯಾಕ್ಸಿನೇಷನ್ ಡ್ರೈವ್ ಮತ್ತು ಆಧುನಿಕ ಔಷಧಿಗಳ ವಿರುದ್ಧ ರಾಮ್ ದೇವ್ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಐಎಂಎ ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಆಗಸ್ಟ್ 23, 2022 ರಂದು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಆಯುಷ್ ಸಚಿವಾಲಯ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್ ಗೆ ನೋಟಿಸ್ ನೀಡಿತ್ತು.

ದೀರ್ಘ ವಿಚಾರಣೆಯ ಸಮಯದಲ್ಲಿ, ಆಧುನಿಕ ವೈದ್ಯ ಪದ್ಧತಿಗಳ ವಿರುದ್ಧ ದಾರಿತಪ್ಪಿಸುವ ಹಕ್ಕುಗಳು ಮತ್ತು ಜಾಹೀರಾತುಗಳನ್ನು ಪ್ರಕಟಿಸದಂತೆ ನ್ಯಾಯಪೀಠ ಪತಂಜಲಿ ಆಯುರ್ವೇದಕ್ಕೆ ಸೂಚಿಸಿತು.

ಒಂದು ನಿರ್ದಿಷ್ಟ ಕಾಯಿಲೆಯನ್ನು ಗುಣಪಡಿಸಬಹುದು ಎಂದು ಸುಳ್ಳು ಹೇಳಿಕೆ ನೀಡಿದರೆ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ.ಗಳ ದಂಡ ವಿಧಿಸುವ ಬಗ್ಗೆಯೂ ನ್ಯಾಯಪೀಠ ಪರಿಗಣಿಸಬಹುದು ಎಂದು ಅದು ಹೇಳಿದೆ.

ಇತ್ತೀಚಿನ ಸುದ್ದಿ

Exit mobile version