10:07 AM Thursday 21 - August 2025

ಕುಖ್ಯಾತ ಕ್ರಿಮಿನಲ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಗ್ಗೆ ಮಾಹಿತಿ ಕೊಟ್ರೆ 10 ಲಕ್ಷ: ಎನ್ ಐಎ ಘೋಷಣೆ

25/10/2024

ಕ್ರಿಮಿನಲ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಬಗ್ಗೆ ಮಾಹಿತಿ ನೀಡುವವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10 ಲಕ್ಷ ಬಹುಮಾನ ಘೋಷಿಸಿದೆ. ‘ಭಾನು’ ಎಂದೂ ಕರೆಯಲ್ಪಡುವ ಅನೋಲ್ ಬಿಷ್ಣೋಯ್ ನಕಲಿ ಪಾಸ್ ಪೋರ್ಟ್ ಮೇಲೆ ಭಾರತದಿಂದ ಪಲಾಯನ ಮಾಡಿ, ಕಳೆದ ವರ್ಷ ಕೀನ್ಯಾದಲ್ಲಿ ಮತ್ತು ಈ ವರ್ಷ ಕೆನಡಾದಲ್ಲಿ ಕಾಣಿಸಿಕೊಂಡಿದ್ದರು.

2022ರಲ್ಲಿ ಪಂಜಾಬ್ ಗಾಯಕ ಸಿಧು ಮೊಸೆವಾಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಆತ ಬೇಕಾಗಿದ್ದಾನೆ. ಅನ್ಮೋಲ್ ಬಿಷ್ಣೋಯ್ ವಿರುದ್ಧ 18 ಪ್ರಕರಣಗಳು ದಾಖಲಾಗಿವೆ.

ಇದಕ್ಕೂ ಮೊದಲು ಏಪ್ರಿಲ್ 14 ರಂದು ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಆತನ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಿದ್ದರು.

ಅಕ್ಟೋಬರ್ 12 ರಂದು ತನ್ನ ಮಗನ ಕಚೇರಿಯ ಎದುರೇ ಎನ್ ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಕೊಂದ ಶೂಟರ್ ಗಳೊಂದಿಗೆ ಅನ್ಮೋಲ್ ಬಿಷ್ಣೋಯಿ ಸಂಪರ್ಕದಲ್ಲಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

66 ವರ್ಷದ ಎನ್ ಸಿಪಿ ನಾಯಕ ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ಮೂವರು ವ್ಯಕ್ತಿಗಳು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಅನ್ಮೋಲ್ ಬಿಷ್ಣೋಯಿ ಆರೋಪಿಯೊಂದಿಗೆ ನೇರ ಸಂಪರ್ಕದಲ್ಲಿದ್ದರು ಮತ್ತು ಅವರು ಕೆನಡಾ ಮತ್ತು ಅಮೆರಿಕದಿಂದ ಕಾರ್ಯನಿರ್ವಹಿಸುತ್ತಿದ್ದಾಗ ಆರೋಪಿಗಳೊಂದಿಗೆ ಸಂಪರ್ಕದಲ್ಲಿರಲು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಸ್ನಾಪ್ ಚಾಟನ್ನು ಬಳಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version