ಸುಹಾಸ್ ಶೆಟ್ಟಿ ಕುಟುಂಬಕ್ಕೆ  25 ಲಕ್ಷ ರೂ. ಪರಿಹಾರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಣೆ

b y vijayendra
02/05/2025

ಮಂಗಳೂರು: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾದ ರೌಡಿಶೀಟರ್  ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಸುಹಾಸ್ ಶೆಟ್ಟಿ ಅಂತಿಮ ದರ್ಶನ್ ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಎಂದರು.

ಪೊಲೀಸ್ ಇಲಾಖೆ ವೈಫಲ್ಯ ಮೇಲ್ನೋಟಕ್ಕೆ ಕಂಡು ಬರ್ತಿದೆ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ ಎಂದ ಅವರು,  ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಕುಟುಂಬಕ್ಕೆ ಧೈರ್ಯ ಹೇಳುವ ಪ್ರಯತ್ನ ಮಾಡಿದ್ದೇವೆ. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ. ಕುಟುಂಬದ ಆಧಾರ ಸ್ತಂಬ ಕಳಚಿ ಬಿದ್ದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುವ ತೀರ್ಮಾನ ಮಾಡಿದ್ದೇವೆ. ಮುಖ್ಯಮಂತ್ರಿ, ಗೃಹಸಚಿವರು ಘಟನೆಯ ಗಂಭೀರತೆ ಅರ್ಥ ಮಾಡಿಕೊಳ್ಳಬೇಕು. ಸರ್ಕಾರದಿಂದ ಪರಿಹಾರ ನೀಡಬೇಕು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸಬೇಕು ಎಂದು ಆಗ್ರಹಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version