ರಸ್ತೆ ಅಪಘಾತದ ಗಾಯಾಳುಗಳಿಗೆ ನೆರವಾಗುವವರಿಗೆ 25 ಸಾವಿರ ರೂ. ಬಹುಮಾನ: ನಿತಿನ್ ಗಡ್ಕರಿ

ನವದೆಹಲಿ: ಅಪಘಾತದ ಗಾಯಾಳುಗಳಿಗೆ ನೆರವಿಗೆ ಮುಂದಾಗುವ ವ್ಯಕ್ತಿಗಳಿಗೆ 25 ಸಾವಿರ ರೂಪಾಯಿಗಳ ಬಹುಮಾನವನ್ನು ನೀಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಅಪಘಾತಗೊಂಡ ವ್ಯಕ್ತಿಗೆ ನೆರವು ನೀಡಲು ಮುಂದಾಗುವ ಯಾವುದೇ ಮೂರನೇ ವ್ಯಕ್ತಿಗೆ 25 ಸಾವಿರ ರೂಪಾಯಿಗಳ ವರೆಗೆ ಬಹುಮಾನ ನೀಡುತ್ತೇವೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಅಪಘಾತದಿಂದ ಅಥವಾ ಅಪಘಾತದ ಬಳಿಕ ವ್ಯಕ್ತಿಯು ಯಾವುದೇ ಆಸ್ಪತ್ರೆಗೆ ದಾಖಲಾದರೆ ಅವರಿಗೆ ಒಂದೂವರೆ ಲಕ್ಷ ರೂ.ವರೆಗೆ ಧನಸಹಾಯ ನೀಡಲಾಗುವುದು ಅಥವಾ 7 ವರ್ಷಗಳ ವರೆಗೆ ವೈದ್ಯರಿಂದ ಆಗುವ ಚಿಕಿತ್ಸೆಯ ವೆಚ್ಚವನ್ನು ಭರಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಭಾರತದಲ್ಲಿ ಪ್ರತೀ ವರ್ಷ 4,80,000 ಅಪಘಾತಗಳು ಸಂಭವಿಸುತ್ತವೆ. 18ರಿಂದ 45 ವರ್ಷ ವಯಸ್ಸಿನ 1,88,000 ಮಂದಿ ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ 10 ಸಾವಿರ ಮಂದಿ ಇದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7