ಆರೆಸ್ಸೆಸ್ ನ ಸಕ್ರಿಯ ಸ್ವಯಂ ಸೇವಕನಿಂದ ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ: ಕಾಂಗ್ರೆಸ್ ಆರೋಪ

Pradeep Kurulkar Honeytrap: ಮುಂಬೈ: ಹನಿಟ್ರ್ಯಾಪ್ ಗೆ ಒಳಗಾಗಿ ಭಾರತದ ರಕ್ಷಣಾ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಡಿಆರ್ ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಆರೆಸ್ಸೆಸ್ ನ ಸಕ್ರಿಯ ಸ್ವಯಂ ಸೇವಕನಿಂದ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಳೆದ ವಾರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಪ್ರದೀಪ್ ನನ್ನು ಬಂಧಿಸಿತ್ತು. ಆತನನ್ನು ಮೇ 15ರವರೆಗೆ ಎಟಿಎಸ್ ವಶಕ್ಕೆ ನೀಡಲಾಗಿದೆ. ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಆರೆಸ್ಸೆಸ್ ನ ಪ್ರಮುಖ ಕಾರ್ಯಕ್ರಮಗಳಲ್ಲಿ ಪ್ರದೀಪ್ ಭಾಗಿಯಾಗಿರುವ ವಿಡಿಯೋಗಳನ್ನು ಕಾಂಗ್ರೆಸ್ ವಕ್ತಾರರು ಮಾಧ್ಯಮಗಳಿಗೆ ತೋರಿಸಿದ್ದು, ಇದು ರಾಷ್ಟ್ರೀಯವಾದಿ ಎಂದು ಬಿಂಬಿಸಿಕೊಳ್ಳುತ್ತಿರುವ ಆರೆಸ್ಸೆಸ್ ನ ಕುತಂತ್ರ. ಸಂಘಕ್ಕೂ ಪ್ರದೀಪ್ ಗೂ ಇರುವ ಸಂಬಂಧವೇನು ಎನ್ನುವುದನ್ನು ಪ್ರಧಾನಿ ಹಾಗೂ ಗೃಹ ಸಚಿವರು ವಿವರಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw