RSS ಪಥಸಂಚಲನ ವಿವಾದ: ಶಾಂತಿ ಸಭೆ ಅರ್ಧಕ್ಕೆ ಮೊಟಕು
ಕಲಬುರಗಿ: ಚಿತ್ತಾಪುರ ಕ್ಷೇತ್ರದಲ್ಲಿ ಆರ್ ಎಸ್ ಎಸ್ ಪಥಸಂಚಲನ ವಿವಾದದ ಹಿನ್ನೆಲೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಆದರೆ ತೀವ್ರ ವಾಗ್ವಾದ ಹಿನ್ನೆಲೆ ಶಾಂತಿ ಸಭೆ ಅರ್ಧಕ್ಕೆ ಮೊಟಕುಗೊಂಡಿತು.
ಒಂದೆಡೆ ಜೈಭೀಮ್ ಸೇನೆ ಸಂಘಟನೆಯ ಮುಖಂಡ ಗುಂಡಪ್ಪ ಲಂಡನ್ಕರ್ ಅವರನ್ನು ಒಳಗಡೆ ಬಿಡದ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ತೀವ್ರ ವಾಗ್ವಾದ ನಡೆದರೆ. ಮತ್ತೊಂದೆಡೆ, ಆರ್ ಎಸ್ ಎಸ್ ಸಂಘಟನೆ ವಿರುದ್ಧ ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ ಹಾಗೂ ಛಲವಾದಿ ಮಹಾಸಭಾ ಸಂಘಟನೆಗಳು ತೀವ್ರ ವಾಗ್ವಾದ ನಡೆಸಿದ ಹಿನ್ನೆಲೆ ಸಭೆಯಲ್ಲಿ ಯಾವುದೇ ಒಮ್ಮತದ ಅಭಿಪ್ರಾಯ ಸಾಧ್ಯವಾಗಲಿಲ್ಲ.
ಆರ್ ಎಸ್ ಎಸ್ ಪಥ ಸಂಚಲನ ನಡೆಸಲಿ ಆದರೆ, ಲಾಠಿ ಬಿಟ್ಟು ಪಥ ಸಂಚಲನ ನಡೆಸಲಿ ಎಂದು ದಲಿತ ಸಂಘಟನೆಗಳು ಒತ್ತಾಯಿಸಿದವು. ಆದರೆ ಇದಕ್ಕೆ ಆರ್ ಎಸ್ ಎಸ್ ಮುಖಂಡರು ಒಪ್ಪದೇ ವಾದ ಪ್ರತಿವಾದ, ವಾಗ್ವಾದಗಳು ನಡೆದವು.
ಸಭೆಯಲ್ಲಿ ಯಾವುದೇ ಒಮ್ಮತದ ನಿರ್ಧಾರ ಕೈಗೊಳ್ಳದ ಕಾರಣ ಜಿಲ್ಲಾಡಳಿತ ಎಲ್ಲ ಸಂಘಟನೆಗಳ ಲಿಖಿತ ಅಭಿಪ್ರಾಯವನ್ನು ಸಂಗ್ರಹಿಸಿ ಹೈಕೋರ್ಟ್‌ಗೆ ವರದಿ ಸಲ್ಲಿಸಲು ತೀರ್ಮಾನಿಸಿದೆ. ಹೀಗಾಗಿ ಆರ್ ಎಸ್ ಎಸ್ ಪಥಸಂಚಲನ ಕುರಿತ ಅಂತಿಮ ತೀರ್ಪು ಈಗ ಹೈಕೋರ್ಟ್ ಕೈಯಲ್ಲಿ ಇದೆ. ಅಕ್ಟೋಬರ್ 30ರಂದು ಕಲಬುರಗಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























