ಮನೆಯಲ್ಲಿ ಸಾಂಬರ್ ಮಾಡಿಲ್ಲ ಅಂತ ಗಲಾಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಸಾಂಬರ್’ ಗಲಾಟೆ..! - Mahanayaka

ಮನೆಯಲ್ಲಿ ಸಾಂಬರ್ ಮಾಡಿಲ್ಲ ಅಂತ ಗಲಾಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಸಾಂಬರ್’ ಗಲಾಟೆ..!

sambar fight
28/04/2026

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹಾಂದಿ ಸಮೀಪ ಕಡೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 173ರ ಪಕ್ಕದಲ್ಲಿರುವ ಮನೆಯಲ್ಲಿ ಸಾಂಬರ್ ಮಾಡಿಲ್ಲ ಎಂಬ ವಿಚಾರಕ್ಕೆ ಕುಟುಂಬ ಕಲಹ ತಾರಕಕ್ಕೇರಿದ ಘಟನೆ ನಡೆದಿದೆ.

ಚಿತ್ರದುರ್ಗ ಮೂಲದ ಕೂಲಿ ಕಾರ್ಮಿಕ ಕುಟುಂಬದಲ್ಲಿ, ನಾಗರಾಜ್ ಎಂಬಾತ ಮದ್ಯಪಾನ ಮಾಡಿ ಮನೆಗೆ ಬಂದು ತನ್ನ ಅಕ್ಕ ಅಂಜಲಿ ಹಾಗೂ ಅಕ್ಕನ ಮಗಳು ಮೌಲ್ಯ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಕುಟುಂಬದ ಜಗಳ ಮನೆಯಿಂದ ಹೊರಬಂದು ನೇರವಾಗಿ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಮುಂದುವರಿದಿದ್ದು, ನಾಗರಾಜ್ ದೊಣ್ಣೆ ಹಿಡಿದು ಇಬ್ಬರಿಗೂ ಬೆದರಿಕೆ ಹಾಕಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಹೆದ್ದಾರಿಯಲ್ಲಿ ಹೈಡ್ರಾಮ ನಡೆದ ಪರಿಣಾಮ ವಾಹನ ಸವಾರರು ಹಾಗೂ ಸ್ಥಳೀಯರು ಬೆಚ್ಚಿಬಿದ್ದರು.

ಜಗಳ ಬಿಡಿಸಲು ಮುಂದಾದ ಸ್ಥಳೀಯರ ಮೇಲೂ ನಾಗರಾಜ್ ಹಲ್ಲೆಗೆ ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಸ್ಥಳೀಯರು ಆಲ್ದೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ನಾಗರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ.

ಈ ಘಟನೆ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ