ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಭಿಯಾನ ನಡೆಸುತ್ತಿದ್ದೇವೆ: ಕಮಿಷನರ್ ಕುಲದೀಪ್ ಆರ್. ಜೈನ್
ಜಿಲ್ಲೆಯ ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಭಿಯಾನ ನಡೆಸುತ್ತಿದೆ. ಆದರೆ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ತನಗೆ ಅಂತಹ ಯಾವುದೇ ಮಾಹಿತಿ ದೊರಕಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ತಿಳಿಸಿದ್ದಾರೆ.
ಮಂಗಳೂರಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಧಿಕಾರಿ ಹಾಗೂ ಸಿಬ್ಬಂದಿಗೆ ಈ ಬಗ್ಗೆ ಈಗಾಗಲೇ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. ಡ್ರಗ್ಸ್ ವಿಚಾರದಲ್ಲಿ ಸಿಬ್ಬಂದಿ ಅಥವಾ ಅಧಿಕಾರಿಗಳು ಭಾಗಿಯಾಗಿರುವುದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಅಂತಹ ಯಾವುದೇ ರೀತಿಯ ಅಂಶ ಗಮನಕ್ಕೆ ಬಂದಲ್ಲಿಯೂ ತಾರಮತ್ಯವಿಲ್ಲದೆ ಕ್ರಮ ವಹಿಸಲಾಗುವುದು ಎಂದರು.
ಡ್ರಗ್ಸ್ ಮುಕ್ತ ಮಂಗಳೂರು ಪ್ರಯುಕ್ತ ಎರಡು ಹಂತದಲ್ಲಿ ಕಾರ್ಯಾಚರಣೆ ನಡೆಸಲು ಪೊಲೀಸ್ ಇಲಾಖೆ ಮುಂದಾಗಿದೆ. ಮೊದಲನೆಯದಾಗಿ ಡ್ರಗ್ಸ್ ಪೂರೈಕೆ-ಸಾಗಾಟದಾರರ ಮೇಲೆ ಇಲಾಖೆ ತೀಕ್ಷ್ಣ ಹಾಗೂ ಆಳವಾಗಿ ನಿಗಾ ಇರಿಸಿದೆ. ಮತ್ತೊಂದೆಡೆ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























