ಉಕ್ರೇನ್‌ ನಲ್ಲಿ ರಷ್ಯಾದಿಂದ ತಾತ್ಕಾಲಿಕ ಕದನ ವಿರಾಮ ಘೋಷಣೆ - Mahanayaka

ಉಕ್ರೇನ್‌ ನಲ್ಲಿ ರಷ್ಯಾದಿಂದ ತಾತ್ಕಾಲಿಕ ಕದನ ವಿರಾಮ ಘೋಷಣೆ

vladimir putin
05/03/2022

ಕೀವ್‌: ಉಕ್ರೇನ್ ಮತ್ತು ರಷ್ಯಾ ಯುದ್ಧ 10 ದಿನಕ್ಕೆ ಕಾಲಿಟ್ಟಿದ್ದು, ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ.


Provided by

ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಇದಕ್ಕೂ ಮುನ್ನ ಬೆಲಾರಸ್‌ನ ಬ್ರೆಸ್ಟ್‌ನಲ್ಲಿ ನಡೆದ ಎರಡನೇ ಸುತ್ತಿನ ಮಾತುಕತೆಯಲ್ಲಿ ನಾಗರಿಕರ ಸ್ಥಳಾಂತರದ ಕುರಿತಂತೆ ಚರ್ಚೆ ನಡೆಸಲಾಗಿತ್ತು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ. ಈ ವೇಳೆ ರಷ್ಯಾ ತಕ್ಷಣದ ಕದನ ವಿರಾಮವನ್ನು ಘೋಷಿಸಬೇಕು ಎಂದು ಉಕ್ರೇನ್ ಸರ್ಕಾರ ಒತ್ತಾಯ ಮಾಡಿತ್ತು.

ನಾಗರಿಕರಿಗೆ ಮಾನವೀಯ ಕಾರಿಡಾರ್​ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾವು ಕದನ ವಿರಾಮವನ್ನು ಘೋಷಿಸಿವೆ. ಈ ಕುರಿತು ರಷ್ಯಾದ ಮಾಧ್ಯಮ ಔಟ್ಲೆಟ್ ಸ್ಪುಟ್ನಿಕ್ ವರದಿಯನ್ನು ಎಎನ್ ​ಐ ಸುದ್ದಿಸಂಸ್ಥೆ ಉಲ್ಲೇಖಿಸಿದೆ.

ವರದಿಗಳ ಪ್ರಕಾರ, ಉಕ್ರೇನ್‌ನ ಮರಿಯುಪೋಲ್, ವೊಲ್ನೋವಾಖಾ ನಿವಾಸಿಗಳಿಗೆ ಮಾನವೀಯ ಕಾರಿಡಾರ್‌ಗಳನ್ನು ತೆರೆಯಲಾಗುವುದು. ಉಕ್ರೇನ್ ಮೇಲೆ ದಾಳಿ ಮಾಡಿ, ಪ್ರಮುಖ ನಗರಗಳನ್ನು ವಶಪಡಿಸಿಕೊಂಡು ರಾಜಧಾನಿ ಕೀವ್ ನಗರಕ್ಕೆ ಮುತ್ತಿಗೆ ಹಾಕಿರುವ ರಷ್ಯಾ ಸೇನೆ ಇಂದು ಮುಂಜಾನೆ 6 ಗಂಟೆಯಿಂದ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಲೇಜಿನಿಂದ ಡಿಬಾರ್: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಶೇನ್ ವಾರ್ನ್ ಹಠಾತ್ ನಿಧನಕ್ಕೆ ಕಾರಣವೇನು?

ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿತ:10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ

ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ: 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

 

ಇತ್ತೀಚಿನ ಸುದ್ದಿ