4:35 AM Wednesday 22 - October 2025

ಜಿ 20 ಶೃಂಗಸಭೆ: ರಷ್ಯಾ ಅಧ್ಯಕ್ಷ ವ್ಲಾಡಿಮೀರ್‌ ಪುಟಿನ್‌ ಗೈರು..?

26/08/2023

ಭಾರತದಲ್ಲಿ ಶೀಘ್ರವೇ ಜಿ 20 ಶೃಂಗಸಭೆ ನಡೆಯಲಿದೆ. ಈ ಸಭೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮೀರ್‌ ಪುಟಿನ್‌ ಗೈರಾಗುವ ಸಾಧ್ಯತೆ ಇದೆ.

ಸೆಪ್ಟೆಂಬರ್‌ 8-10 ರವರೆಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಗೆ ಪುಟಿನ್‌ ಭಾಗವಹಿಸುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ.
ಇನ್ನೂ ವರ್ಚ್ಯೂವಲ್‌ ಭಾಗವಹಿಸುವಿಕೆ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಪುಟಿನ್‌ ಈಗಾಲೇ ರಷ್ಯಾ ಉಕ್ರೇನ್‌ ಮಧ್ಯದ ಯುದ್ಧದ ಸುಳಿಯಲ್ಲಿ ಸಿಲುಕಿದ್ದು , ಈ ವೇಳೆ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಯೋಚನೆಯಲ್ಲಿ ಪುಟಿನ್‌ ಇಲ್ಲ ಎಂದು ಮೂಲಗಳು ತಿಳಿಸಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ ಕೂಡ ಪುಟಿನ್‌ ವರ್ಚ್ಯೂವಲ್‌ ಆಗಿ ಭಾಗವಹಿಸಿದ್ದರು.

ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಚೀನಾ ಅಧ್ಯಕ್ಷ ಕ್ಸೀ ಜಿನ್‌ಪಿಂಗ್‌, ಫ್ಯಾನ್ಸ್‌ ಅಧ್ಯಕ್ಷ ಇಮ್ಯಾನುಯಲ್‌ ಮ್ಯಾಕ್ರಮ್‌ ಕೆನಡಾ ಪ್ರಧಾನಿ ಜಸ್ಟಿಸ್‌ ಟ್ರುಡೋ ಸೇರಿದಂತೆ ಅನೇಕ ಗಣ್ಯರು ದೆಹಲಿಗೆ ಆಗಮಿಸುವ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

Exit mobile version