ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಕೇಸರಿಪಡೆ ಮುತ್ತಿಗೆಗೆ ಯತ್ನ: ರಾಜೀನಾಮೆಗೆ ಒತ್ತಾಯ
ಕಲಬುರಗಿ: ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ, ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಖರ್ಗೆ ಮನೆಗೆ ಕೇಸರಿ ಪಡೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಂತೆಯೇ ಬಿಜೆಪಿ ನಾಯಕರನ್ನು ಮಾರ್ಗ ಮಧ್ಯೆ ಪೊಲೀಸರು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಖರ್ಗೆ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜಗತ್ ವೃತ್ತದಿಂದ ಖರ್ಗೆ ಮನೆಯವರೆಗೆ ಪಾದಯಾತ್ರೆ ನಡೆಸಿದ ಪ್ರತಿಭಟನಾಕಾರರು ಸಾವಿರಾರು ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೈರು ಹಾಜರಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: