ವಾಲ್ಮೀಕಿ ಜಾತ್ರೆ: ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಲು ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಮನವಿ
ಚಾಮರಾಜನಗರ :ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ. 8ಮತ್ತು 9 ರಂದು ೨ ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿವೆ.
5ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಸಮುದಾಯದ ಬಂಧುಗಳು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿಕೊಡುವಂತೆ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಮನವಿ ಮಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯ ದಿವ್ಯಸಾನಿಧ್ಯ ವಹಿಸಿ ಜಾತ್ರಾಮಹೋತ್ಸವದ ಪೋಸ್ಟರ್ ಬಿಡುಗಡೆ ಮಾತನಾಡಿದ ಅವರು, ಜಾಗೃತಿಗಾಗಿ, ಸಂಘಟನೆಗಾಗಿ, ಒಗ್ಗಟ್ಟಿಗಾಗಿ ಕಳೆದ ವರ್ಷಗಳಿಂದ ಮಠದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆಯನ್ನು ಮಾಡಿಕೊಂಡು ಬರಲಾಗುತ್ತಿದೆ.
ಈ ಜಾತ್ರಾಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ತಮ್ಮ252 ದಿನಗಳ ಹೋರಾಟದಲ್ಲಿ ಚಾಮರಾಜನಗರ ಜಿಲ್ಲೆಯ ಎಸ್‌ಸಿ, ಎಸ್ ಟಿ ಸಮುದಾಯದವರು ಕೊಟ್ಟ ಸಹಕಾರ, ಹೋರಾಟದ ಫಲವಾಗಿ ಎಸ್‌ಸಿ, ಎಸ್‌ಟಿ ಮಿಸಲಾತಿ ಹೆಚ್ಚಳವಾಗಿದೆ ಅದಕ್ಕಾಗಿ ಜಿಲ್ಲೆಯ ಜನತೆ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ. ಈಗ ಒಂದು ಬೇಡಿಕೆ ಈಡೇರಿದೆ ಇನ್ನೂ ಹತ್ತಾರು ಬೇಡಿಕೆಗಳು ಈಡೇರಬೇಕಾಗಿದೆ ಅದಕ್ಕಾಗಿ ಹೆಚ್ಚಿನ ಮಟ್ಟದಲ್ಲಿ ಸಂಘಟನೆ ಆಗಬೇಕಿದೆ ಎಂದರು.
ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳು 2 ಕೋಟಿ ಜನಸಂಖ್ಯೆ ಇದ್ದೇವೆ. ನಾವುಗಳು ಒಂದಾದರೆ ಏನುಬೇಕಾದರೂ ಮಾಡಲು ಸಾಧ್ಯವಿದೆ. ಪ್ರಜಾಪ್ರಭುತ್ವದಲ್ಲಿ ಸಂಘಟನೆಯ ಒಂದು ದೊಡ್ಡಶಕ್ತಿಯಾಗಿದೆ. ಪರಿಶಿಷ್ಠ ಜಾತಿ ಸಮುದಾಯದಲ್ಲಿ ಬರುವ 101 ಜಾತಿಗಳು, ಪರಿಶಿಷ್ಠ ಪಂಗಡದಲ್ಲಿ ಬರುವ 51ಜಾತಿಗಳ ಸಮಸ್ಯೆ, ನೋವುಗಳು ಒಂದೇ ಆಗಿವೆ.
ಎಸ್ಸಿ, ಎಸ್ಟಿಗಳೆಂದರೆ ಮೇಲ್ವರ್ಗದವರು ಕೀಳು ಭಾವನೆವಿಟ್ಟುಕೊಂಡಿದ್ದರು.ಆದರಿಂದ ಎಸ್ಸಿ, ಎಸ್ಟಿಗಳ ಸಮುದಾಯಗಳ ಬದುಕು ಸ್ವಾಭಿಮಾನದ ಬದುಕ ಆಗಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಸಂವಿಧಾನದಲ್ಲಿ ಅನೇಕ ಕಾನೂನುಗಳನ್ನು ಮಾಡಿ ಮೀಸಲಾತಿ ಸೇರಿದಂತೆ ಅನೇಕ ಸೌಲಭ್ಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಮುಂದುವರೆದ ಸಮುದಾಯಗಳು ಮೀಸಲಾತಿಗಾಗಿ ಹೋರಾಟ ಮಾಡುತ್ತಿವೆ. ಸಂವಿಧಾನಬದ್ದ ಹಕ್ಕುಗಳನ್ನು ಪಡೆಯಲು ಎಸ್‌ಸಿ, ಎಸ್‌ಟಿ ಸಮುದಾಯಗಳು ಒಂದಾಗಬೇಕಿದೆ ಎಂದರು.
ಸಭೆಯಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ತಾಲೂಕು ನಾಯಕ ವಿದ್ಯಾ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ, ವಾಲ್ಮೀಕಿ ಟ್ರಸ್ಟ್ ಅಧ್ಯಕ್ಷ ಬಿ. ಕಾಂ. ಮಹದೇವನಾಯಕ, ಜಿ.ಪಂ. ಮಾಜಿ ಸದಸ್ಯ ರಮೇಶ್, ತಾ.ಪಂ.ಮಾಜಿ ಅಧ್ಯಕ್ಷ ಹೆಚ್.ವಿ.ಚಂದ್ರು, ನಗರಸಭಾ ಮಾಜಿ ಸದಸ್ಯ ಚೆಂಗುಮಣಿ, ಗ್ರಾ.ಪಂ. ಅಧ್ಯಕ್ಷ ಮಹೇಂದ್ರ, ಮುಖಂಡರಾದ ಕೃಷ್ಣನಾಯಕ, ವೆಂಕಟರಾಮನಾಯಕ, ರಮೇಶ್‌ನಾಯಕ, ಸಾಗಡೆ ನಂಜುಂಡನಾಯಕ ಹಾಗೂ ತಾಲೂಕಿನ ವಿವಿಧ ಗ್ರಾಮಗಳ ನಾಯಕ ಸಮುದಾಯದ ಯಜಮಾನರು, ಮುಖಂಡರುಗಳು ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka