ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಪ್ರಕರಣ: ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು - Mahanayaka
8:24 PM Thursday 29 - January 2026

ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಪ್ರಕರಣ: ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

19/01/2025

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಭಾನುವಾರ ಮುಂಜಾನೆ ಥಾಣೆಯಿಂದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ದಾಳಿಕೋರನನ್ನು ಮೊಹಮ್ಮದ್ ಅಲಿಯನ್ ಅಲಿಯಾಸ್ ಬಿಜೆ ಎಂದು ಗುರುತಿಸಲಾಗಿದೆ. ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಅಲಿಯನ್ ಅವರನ್ನು ಬಾಂದ್ರಾಗೆ ಕರೆತರಲಾಯಿತು. ಅವರನ್ನು ಇಂದು ಬೆಳಿಗ್ಗೆ ಪೊಲೀಸ್ ರಿಮಾಂಡ್ ಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಬಂಧಿತ ಆರೋಪಿ ವಿಜಯ್ ದಾಸ್ ಎಂದು ತನ್ನ ಹೆಸರನ್ನು ಇಟ್ಟುಕೊಂಡಿದ್ದು, ರೆಸ್ಟೋರೆಂಟ್‌ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದ. ಆತ ಈ ಕೃತ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಇಂಡಿಯಾ ಟುಡೇ ವರದಿಯ ಪ್ರಕಾರ, ಥಾಣೆಯ ಹಿರಾನಂದಾನಿ ಎಸ್ಟೇಟ್ ನ ಮೆಟ್ರೋ ನಿರ್ಮಾಣ ಸ್ಥಳದ ಬಳಿಯ ಕಾರ್ಮಿಕ ಶಿಬಿರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ವಿಲೆ ಪಾರ್ಲೆ ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧನಕ್ಕೆ ಸಹಕರಿಸಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ