5:27 PM Saturday 31 - January 2026

ಹೋರಾಟದಿಂದ ಹಿಂದೆ ಸರಿದಿಲ್ಲ: ಕುಸ್ತಿಪಟು ಸಾಕ್ಷಿ ಮಲಿಕ್ ಸ್ಪಷ್ಟನೆ

05/06/2023

ನಮ್ಮ ಹೋರಾಟದ ವಿಷಯದಲ್ಲಿ ನಾವು ಯಾರ ಜೊತೆಗೂ ರಾಜಿ ಮಾಡಿಕೊಂಡಿಲ್ಲ. ಜೊತೆಗೆ ಹೋರಾಟದಿಂದ ಹಿಂದೆಯೂ ಸರಿಯುವುದಿಲ್ಲ. ನ್ಯಾಯಕ್ಕಾಗಿ ಒಗ್ಗಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ, ನಮ್ಮನ್ನು ದುರ್ಬಲಗೊಳಿಸಲು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಸಾಕ್ಷಿ ಮಲಿಕ್ ಹಾಗೂ ಅವರ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಸ್ಪಷ್ಟನೆ ನೀಡಿದ್ದಾರೆ.

ಶನಿವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಸಭೆ ನಡೆಸಿದ ಬೆನ್ನಲ್ಲೇ ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪ್ರಮುಖ ಕುಸ್ತಿಪಟುಗಳಲ್ಲಿ ಒಬ್ಬರಾದ ಸಾಕ್ಷಿ ಮಲಿಕ್ ಹೋರಾಟದಿಂದ ಹಿಂದೆ ಸರಿದಿದ್ದು, ತಮ್ಮ ಕೆಲಸಕ್ಕಾಗಿ ರೈಲ್ವೇ ಇಲಾಖೆಗೆ ಮರಳಿದ್ದಾರೆ ಎಂದು ವರದಿಯಾಗಿತ್ತು.

ಈ ವರದಿ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಾಕ್ಷಿ ಮಲಿಕ್ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಹೋರಾಟ ಹಿಂದಕ್ಕೆ ಪಡೆದಿರುವುದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಹೋರಾಟ ಮುಂದುವರಿಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದ್ದಾರೆ.

ಇನ್ನು ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಖುದ್ದು ಸಾಕ್ಷಿ ಮಲಿಕ್ ಕೂಡಾ ಪ್ರತಿಕ್ರಿಯೆ ನೀಡಿದ್ದು, ಹೋರಾಟದಿಂದ ಹಿಂದೆ ಸರಿದಿರುವ ಸುದ್ದಿ ಸಂಪೂರ್ಣ ತಪ್ಪು. ನ್ಯಾಯಕ್ಕಾಗಿ ನಡೆಸುತ್ತಿರುವ ಹೋರಾಟದಿಂದ ನಾವು ಹಿಂದೆ ಸರಿದಿಲ್ಲ, ನಾವೂ ಹಿಂದೆ ಸರಿಯುವುದೂ ಇಲ್ಲ ಎಂದು ಸವಾಲು ಹಾಕಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version