ಸಾಲಬಾಧೆಯಿಂದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು
ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಇಲ್ಲಿನ ನಿವಾಸಿ ಯಶೋಧರ(39) ಎಂಬಾತನಾಗಿದ್ದಾನೆ. ಈತನ ಸ್ವ ಸಹಾಯ ಸಂಘದಲ್ಲಿ ಹಾಗೂ ಬ್ಯಾಂಕಿನಲ್ಲೂ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಅಲ್ಲದೇ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ.
ಈ ಅ.31ರಂದು ಮನೆಯ ಅಂಗಳದಲ್ಲಿ ಈತ ವಿಷ ಸೇವಿಸಿದ್ದು, ಆತನ ಪತ್ನಿ ಹಾಗೂ ಸ್ಥಳೀಯರು ಸೇರಿ ಆತನ್ನು ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಶುಕ್ರವಾರ ಮೃತ ಪಟ್ಟಿದ್ದಾನೆ. ಘಟನೆಯ ಬಗ್ಗೆಆತನ ಪತ್ನಿ ನೀಡಿರುವ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka