ಬೈಕ್ ಖರೀದಿ ಸೇರಿದಂತೆ  ವಿವಿಧ ಸಾಲಗಳಿಗಾಗಿ ಈಗಲೇ ಅರ್ಜಿ ಸಲ್ಲಿಸಿ - Mahanayaka

ಬೈಕ್ ಖರೀದಿ ಸೇರಿದಂತೆ  ವಿವಿಧ ಸಾಲಗಳಿಗಾಗಿ ಈಗಲೇ ಅರ್ಜಿ ಸಲ್ಲಿಸಿ

20/11/2020

ಮೈಸೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ‘ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber ets, Amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆ ಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ.25,000 ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.


Provided by

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಒಂದು ವೇಳೆ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಮೇಲ್ಕಂಡ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾನುಭವಿಗಳು, ಅವರು ವಾಸಿಸುತ್ತಿರುವ ಆಯಾ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಉಚಿತ ಅರ್ಜಿಗಳನ್ನು ಪಡೆದು, ಅಥವಾ ನಿಗಮದ ವೆಬ್‍ ಸೈಟ್ www.dbcdc.karnataka.gov.in ಅಲ್ಲಿ ಸಲ್ಲಿಸಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ ಡಿಸೆಂಬರ್ 19 ರೊಳಗೆ ಸಲ್ಲಿಸಬೇಕು ಮತ್ತು ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಛೇರಿಯಾ ದೂರವಾಣಿ ಸಂಖ್ಯೆ 0821-2341194 ಅನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ