ಮಾದಕ ವಸ್ತು ಎಂಡಿಎಂಎ ಮಾರಾಟ: ಇಬ್ಬರು ಅರೆಸ್ಟ್

arrest
23/07/2023

ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತರನ್ನು ಕೌಶಿಕ್ ದೇವಾಡಿಗ(26), ಇರ್ಷಾದ್ (29) ಎಂದು ಗುರುತಿಸಲಾಗಿದೆ. ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಇಬ್ಬರು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಅವರಿಂದ ಒಟ್ಟು 9 ಗ್ರಾಂ ತೂಕದ 45,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 95,500 ಎಂದು ಪೊಲೀಸರು ತಿಳಿಸಿದ್ದು, ಆರೋಪಿಗಳ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version