ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್ - Mahanayaka

ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

utchh Bhuj Police
17/04/2024

ಮುಂಬೈ: ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ (Salman Khan house firing) ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿ ನಡೆಸಿದ ಇಬ್ಬರು ಆರೋಪಿಗಳನ್ನು ಕಛ್‌ ಭುಜ್‌ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸಲ್ಮಾನ್ ಖಾನ್ ನಿವಾಸಕ್ಕೆ ಭೇಟಿ ನೀಡಿದ್ದು, ಭದ್ರತೆಯ ಭರವಸೆ ನೀಡಿದ್ದಾರೆ.

ಈ ಗುಂಡಿನ ದಾಳಿ ನಡೆಸಿದವರು ಲಾರೆನ್ಸ್‌ ಬಿಷ್ಣೋಯ್‌, ಅನಮೋಲ್‌ ಬಿಷ್ಣೋಯ್‌ ಗ್ಯಾಂಗ್‌ ನವರು ಎಂಬುದು ದೃಢಪಟ್ಟಿದೆ. ಈ ದಾಳಿ ಆದ ಕೂಡಲೇ ದಾಳಿಯ ಹೊಣೆಯನ್ನು ಹೊತ್ತುಕೊಂಡ ಗ್ಯಾಂಗ್‌, ಸಲ್ಮಾನ್‌ ಖಾನ್‌ಗೆ ಎಚ್ಚರಿಕೆ ಸಂದೇಶ ನೀಡಿತ್ತು. ಸಲ್ಮಾನ್ ಖಾನ್ ಅವರ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಮೇಲೆ ಈ ದಾಳಿ ನಡೆದಿತ್ತು.

ಮುಂಬೈ ಕ್ರೈಂ ಬ್ರಾಂಚ್ ಪ್ರಕರಣದ ತನಿಖೆ ನಡೆಸುತ್ತಿದ್ದು, 10 ತಂಡಗಳನ್ನು ನಿಯೋಜಿಸಿತ್ತು. ಸಿಸಿಟಿವಿ ದೃಶ್ಯಾವಳಿಗಳಿಂದ ದಾಳಿಕೋರರ ಗುರುತು ಸ್ಪಷ್ಟವಾಗಿತ್ತು. ಈ ಚಿತ್ರವನ್ನು ಪೊಲೀಸರು ಎಲ್ಲ ಪೊಲೀಸ್ ಠಾಣೆಗಳಿಗೂ ರವಾನಿಸಿದ್ದರು.

ಮುಂಬೈ ಪೊಲೀಸರು ನೀಡಿರುವ ಸುಳಿವನ್ನು ಆಧರಿಸಿ ಗುಜರಾತ್‌ ನ ಕಛ್‌ ಭುಜ್ ಪೊಲೀಸರು ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ. ಇದನ್ನು ಗುಜರಾತ್ ಡಿಜಿಪಿ (ಕಾನೂನು ಸುವ್ಯವಸ್ಥೆ) ಶಂಶೇರ್ ಸಿಂಗ್ ಖಚಿತಪಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ