ಇಂಡಿಯನ್ ಓವರ್ ಸೀಸ್ ಕಾಂಗ್ರೆಸ್ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಮರು ನೇಮಕ

ಇಂಡಿಯನ್ ಓವರ್ ಸೀಸ್ ಕಾಂಗ್ರೆಸ್ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಅವರನ್ನು ಮರು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಬುಧವಾರ ಪ್ರಕಟಿಸಿದೆ. ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಸ್ಯಾಮ್ ಪಿತ್ರೋಡಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷರಾಗಿ ಮರು ನೇಮಕ ಮಾಡಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸ್ಯಾಮ್ ಪಿತ್ರೋಡಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಈ ಸ್ಥಾನಕ್ಕೆ ಮರು ನೇಮಕ ಮಾಡಿದ್ದಾರೆ ಎಂದು ಎಐಸಿಸಿ ಹೇಳಿಕೆ ಬಿಡುಗಡೆ ಮಾಡಿದೆ.
ಈ ವರ್ಷದ ಮೇ ತಿಂಗಳಲ್ಲಿ, ಭಾರತೀಯರ ನೋಟದ ಬಗ್ಗೆ ಅವರ ಹೇಳಿಕೆಗಳ ಸುತ್ತಲಿನ ವಿವಾದಗಳ ಮಧ್ಯೆ ಪಿತ್ರೋಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ನಂತರ, ಗ್ರ್ಯಾಂಡ್ ಓಲ್ಡ್ ಪಕ್ಷವು ಪಿತ್ರೋಡಾ ಅವರ ಹೇಳಿಕೆಗಳಿಂದ ಅಂತರ ಕಾಯ್ದುಕೊಂಡಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth