ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಕಾರಿ ಪೋಸ್ಟ್ ಹಾಕುವವರಿಗೆ ಎಚ್ಚರಿಕೆ - Mahanayaka
8:38 AM Thursday 18 - September 2025

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಕಾರಿ ಪೋಸ್ಟ್ ಹಾಕುವವರಿಗೆ ಎಚ್ಚರಿಕೆ

07/04/2023

ದಕ್ಷಿಣ ಕನ್ನಡ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಬರವಣಿಗೆ, ಚಿತ್ರ ಇತ್ಯಾದಿ ಪೋಸ್ಟ್‌ಗಳನ್ನು ಹಾಕುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾ ಪೊಲೀಸ್, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಉಪಾಕ್ಷಕರ ಕಚೇರಿಗಳಲ್ಲಿ ಸಾಮಾಜಿಕ ಜಾಲತಾಣ ನಿಗಾ ಘಟಕವು ವಿಶೇಷವಾಗಿ ಗಮನಹರಿಸುತ್ತಿದೆ. ಕಾನೂನುಬಾಹಿರ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ. ವಿಕ್ರಂ ಅಮ್ಟೆ ಎಚ್ಚರಿಕೆ ನೀಡಿದ್ದಾರೆ.


Provided by

ಸಾಮಾಜಿಕ ಜಾಲತಾಣಗಲಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆಯಾಗುವಂತಹ ಪೋಸ್ಟ್‌ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ. ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಸುದ್ದಿ, ಸುಳ್ಳು ಸುದ್ದಿ, ಅಶ್ಲೀಲ-ಅಸಭ್ಯ ವಿಷಯಗಳನ್ನು ಒಳಗೊಂಡು ಪೋಸ್ಟ್ ಹಾಕುವುದು ಕೂಡಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಯಾವುದೇ ವ್ಯಕ್ತಿಯ ಚಾರಿತ್ರ್ಯಹರಣ, ಮಾನಹಾನಿ ಮಾಡುವಂತಹ ಪೋಸ್ಟ್‌ಗಳನ್ನು ಹಾಕುವುದು ಕೂಡ ಅಪರಾಧವಾಗಿದೆ. ಇಂತಹ ಪೋಸ್ಟ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ