2024ರ ಲೋಕಸಭಾ ಚುನಾವಣೆಗೆ ರಣತಂತ್ರ: ಸಮಾಜವಾದಿ ಪಕ್ಷದಿಂದ ‘ಅಸ್ಸಿ ಹರಾವೋ, ಬಿಜೆಪಿ ಹಠಾವೋ’ ಅಭಿಯಾನ

‘ಅಸ್ಸಿ ಹರಾವೋ, ಬಿಜೆಪಿ ಹಠಾವೋ (ಯುಪಿಯ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿಯನ್ನು ಸೋಲಿಸಿ ಮತ್ತು ಅದನ್ನು ಹೊರಹಾಕಿ) ಎಂದು 2024 ರ ಲೋಕಸಭಾ ಚುನಾವಣೆ ಮುನ್ನವೇ ಸಮಾಜವಾದಿ ಪಕ್ಷದ ಘೋಷಣೆ ಕೂಗಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕಾದರೆ, ಉತ್ತರ ಪ್ರದೇಶದ ಮತದಾರರು ರಾಜ್ಯದ ಎಲ್ಲಾ ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಸಮಾಜವಾದಿ ಪಕ್ಷದ (ಎಸ್ಪಿ) ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ 80 ಲೋಕಸಭಾ ಸದಸ್ಯ ಸ್ಥಾನವಿದೆ.
ಈ ಹಿಂದೆ, ಕೆಲವು ಬಿಜೆಪಿ ನಾಯಕರು ತಮ್ಮ ಪಕ್ಷವು ರಾಜ್ಯದ ಎಲ್ಲಾ 80 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿಕೆ ನೀಡಿದಾಗ ಅಖಿಲೇಶ್ ಅವರು ಬಿಜೆಪಿ ಎಲ್ಲಾ 80 ಸ್ಥಾನಗಳನ್ನು ಕಳೆದುಕೊಳ್ಳುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ. ಎಸ್ಪಿ ಮತ್ತು ಅದರ ಮಿತ್ರಪಕ್ಷಗಳು ಎಲ್ಲಾ 80 ಸ್ಥಾನಗಳನ್ನು ಗೆಲ್ಲುತ್ತವೆ ಎಂದಿದ್ದಾರೆ. ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡ ಅಖಿಲೇಶ್, “ಬಿಜೆಪಿ ಸರ್ಕಾರವು ಏನು ಹೇಳುತ್ತದೆಯೋ ಅದನ್ನು ಮಾಡುವುದಿಲ್ಲ. ಅಲ್ಲದೇ ಅದು ಏನು ಮಾಡುತ್ತದೆ ಎಂದು ಹೇಳುವುದು ಕೂಡಾ ಇಲ್ಲ ಎಂದು ಕಿಡಿಕಾರಿದ್ದಾರೆ.
ಯುಪಿ ಮುಖ್ಯಮಂತ್ರಿ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ ಆದರೆ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಡಿಯಲ್ಲಿ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಹದಗೆಡುತ್ತಿದೆ ಎಂದು ಅಖಿಲೇಶ್ ಕಿಡಿಕಾರಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw