ಸಂಬಂಧಿಕರ ಮನೆಗೆ ಬಂದು ಹೋಗುವ ವೇಳೆ ದಾರಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಸ್ ಚಾಲಕ! - Mahanayaka

ಸಂಬಂಧಿಕರ ಮನೆಗೆ ಬಂದು ಹೋಗುವ ವೇಳೆ ದಾರಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಸ್ ಚಾಲಕ!

belthangady news
27/08/2022


Provided by

ಬೆಳ್ತಂಗಡಿಯ ಸಂಬಂಧಿಕರ ಮನೆಗೆ ಬಂದು ವ್ಯಕ್ತಿ ವಾಪಸ್ ಮಂಗಳೂರು ಕೆಲಸಕ್ಕೆ ಹೋಗುವಾಗ ಆತ್ಮಹತ್ಯೆ ಮಾಡಿಕೊಂಡ ಘಟನೆ ದಿಡುಪೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ದಿಡುಪೆಯ ಶ್ರೀಧರ್ ಗೌಡ ಎಂಬವರ ಮನೆಗೆ ಸಂಬಂಧಿಯಾಗಿರುವ ಮೂಲತಃ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ 45 ವರ್ಷದ  ಜಯಂತ ಗೌಡ ಎಂಬವರು ಗುರುವಾರ ಬಂದಿದ್ದು, ಶುಕ್ರವಾರ ವಾಪಸ್ ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಮನೆಯವರಲ್ಲಿ ಹೇಳಿ ಹೋಗಿದ್ದರು.  ಆದರೆ,  ದಿಡುಪೆ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಬಂದು ಹಿಂಭಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಇಲ್ಲಿ ಬಸ್ ನಿಲ್ದಾಣಕ್ಕೆ ಪ್ರಯಾಣಿಕರು ಬಂದಾಗ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ , ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಜಯಂತ್ ಗೌಡ ಮಂಗಳೂರಲ್ಲಿ ಮನೆ ಮಾಡಿ ವಾಸವಾಗಿದ್ದು ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ