1:06 AM Thursday 29 - January 2026

ಸಂಭಾಲ್ ಹಿಂಸಾಚಾರ: ಪೊಲೀಸರ ಮೇಲೆ ಗುಂಡು ಹಾರಿಸಿದ ಆರೋಪಿಯ ಬಂಧನ

05/01/2025

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಮಸೀದಿ ಸಮೀಕ್ಷೆಯ ಬಗ್ಗೆ ನಡೆದ ಹಿಂಸಾತ್ಮಕ ಘರ್ಷಣೆಗಳು ನಾಲ್ಕು ಸಾವುಗಳಿಗೆ ಕಾರಣವಾದ ಒಂದು ತಿಂಗಳ ನಂತರ, ಘಟನೆಯ ಸಮಯದಲ್ಲಿ ಪೊಲೀಸರ ಮೇಲೆ ಗುಂಡು ಹಾರಿಸಿದ ಆರೋಪಿಯನ್ನು ಬಂಧಿಸಲಾಗಿದೆ.

ಘಟನೆಯ ನಂತರ ಆರೋಪಿ ಸಲೀಂ ದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ಅಡಗಿಕೊಂಡಿದ್ದ. ಶರಣಾಗಲು ಸಂಭಾಲ್‌ಗೆ ಮರಳಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರ್ಕಲ್ ಆಫೀಸ್ (ಸಿಒ) ಅನುಜ್ ಚೌಧರಿ ಮೇಲೆ ಗುಂಡು ಹಾರಿಸಿದ ಸಲೀಂ ನವೆಂಬರ್ 24 ರಂದು ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಾಗಿನಿಂದ ತಲೆಮರೆಸಿಕೊಂಡಿದ್ದ. ಹಿಂಸಾಚಾರದಲ್ಲಿ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ.ಕೆ.ವಿಷ್ಣೋಯ್ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version