10:14 AM Monday 15 - December 2025

ಡಿಜೆ- ಕೆಜಿ ಹಳ್ಳಿ ಗಲಭೆ: ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಮುಖ ಆರೋಪಿ ಬಂಧನ

17/11/2020

ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಕೊರೋನಾ ಪಾಸಿಟಿವ್ ಎಂದು ಹೇಳಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಕ್ಟೋಬರ್ 23ರಂದು ಆಸ್ಪತ್ರೆಯಿಂದ ಪರಾರಿಯಾಗಿದ್ದರ . ತೀವ್ರ ಹುಡುಕಾಟದ ನಂತರ ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಸಂಪತ್ ರಾಜ್, ನಾಗರಹೊಳೆ, ಕೇರಳ ಮುಂತಾದೆಡೆಗೆ ಪ್ರಯಾಣಿಸುತ್ತಿದ್ದರು. ಆದರೆ ಸೋಮವಾರವಷ್ಟೇ ಬೆಂಗಳೂರಿಗೆ ಬಂದು ಬೆನ್ಸನ್​ ಟೌನ್​ನಲ್ಲಿನ ಅಪಾರ್ಟ್​ಮೆಂಟೊಂದರಲ್ಲಿ ತಂಗಿದ್ದ ಸಂಪತ್​ ರಾಜ್​ ಕುರಿತು ಖಚಿತ ಮಾಹಿತಿ ಸಿಗುತ್ತಿದ್ದಂತೆ, ಎಸಿಪಿ ವೇಣುಗೋಪಾಲ್​ ನೇತೃತ್ವದಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

Exit mobile version