ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಬಂದರೂ ಸಚಿವ ಸಂಪುಟ ವಿಸ್ತರಣೆ ಚರ್ಚೆ ನಡೆದಿಲ್ಲ? - Mahanayaka

ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಬಂದರೂ ಸಚಿವ ಸಂಪುಟ ವಿಸ್ತರಣೆ ಚರ್ಚೆ ನಡೆದಿಲ್ಲ?

06/12/2020

ಬೆಂಗಳೂರು:  ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಕಾಲಿಟ್ಟರೂ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸ್ಪಷ್ಟ ಚಿತ್ರಣಗಳು ಇನ್ನೂ ದೊಕಿಲ್ಲ.


Provided by

ಸಚಿವ ಸಂಪುಟ ವಿಸ್ತರಣೆ ವಿಳಂಬದ ನಡುವೆಯೇ ಹಲವು ರಾಜಕೀಯ ನಾಟಕಗಳು ಮುಗಿದ ಬಳಿಕ ಇದೀಗ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎರಡು ದಿನಗಳ ಕಾಲ ರಾಜ್ಯಕ್ಕೆ ಪ್ರವಾಸ ಕೈಗೊಂಡಿದ್ದು,  ಬಳಿಕ ದೆಹಲಿಗೆ ವಾಪಸ್ ಆಗಲಿದ್ದಾರೆ.  ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದರೂ ಸಚಿವ ಸಂಪು ವಿಸ್ತರಣೆಯ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ವರದಿಯಾಗಿದೆ.

ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ವಿಚಾರ ಮುಖ್ಯಮಂತ್ರಿಯವರ ಪರಮಾಧಿಕಾರ ಎಂದಷ್ಟೆ  ಬಿಜೆಪಿ ಉಸ್ತುವಾರಿಗಳು ಹೇಳಿದರು. ಆದರೆ, ಪಕ್ಷದ ವರಿಷ್ಠರು ಸಂಪುಟ ವಿಸ್ತರಣೆಗೆ ಸೂಚನೆ ನೀಡಿಲ್ಲ ಎಂದು ಹೇಳಲಾಗುತ್ತಿದೆ.

ಈ  ನಡುವೆ ಗ್ರಾಮಪಂಚಾಯತ್ ಚುನಾವಣೆ,  ಅಧಿವೇಶನ ಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಸಮಸ್ಯೆ ಬಗೆಹರಿಯದ ಸಮಸ್ಯೆಯಾಗಿ ಉಳಿದಿದ್ದು, ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಸಾಧ್ಯವಿಲ್ಲವೇ ಎಂಬ ಪ್ರಶ್ನೆಗಳಿಗೆ ಕಾರಣವಾಗಿದೆ.

 

ಇತ್ತೀಚಿನ ಸುದ್ದಿ