12:35 PM Tuesday 20 - January 2026

ಮಂಗಳೂರು: ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆ

hoigebazar mangalore
12/09/2021

ಮಂಗಳೂರು: ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯೋರ್ವರ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದ್ದು, ಧಕ್ಕೆಗೆ ತೆರಳುತ್ತಿದ್ದ ಮೀನುಗಾರರು ಯುವತಿಯ ಮೃತದೇಹ ಕಂಡು ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ಹೊಯ್ಗೆ ಬಜಾರ್ ಸಮೀಪದ ಸಮುದ್ರದ ದಡದಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಸಾರ್ವಜನಿಕರಿಂದ ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಆ್ಯಂಬುಲೆನ್ಸ್ ನೊಂದಿಗೆ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹವನ್ನು ಸರ್ಕಾರಿ ಜಿಲ್ಲಾಸ್ಪತ್ರೆ ವೆನ್ಲಾಕ್ ಗೆ ಸಾಗಿಸಿದ್ದಾರೆ.

ಸದ್ಯದ ಮಾಹಿತಿಯ ಪ್ರಕಾರ ಯುವತಿ ಮೈ ಮೇಲೆ ಯಾವುದೇ ಗಾಯಗಳು ಕಂಡು ಬಂದಿಲ್ಲ ಎಂದು ಹೇಳಲಾಗಿದೆ. ಯಾವ ಕಾರಣದಿಂದ ಯುವತಿ ಸಾವನ್ನಪ್ಪಿದ್ದಾಳೆ ಎನ್ನುವ ಮಾಹಿತಿ ಪೋಸ್ಟ್ ಮಾರ್ಟಂ ರಿಪೋರ್ಟ್ ನಿಂದ ತಿಳಿದು ಬರಬೇಕಿದೆ. ಘಟನೆ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯ ಗುರುತು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಸುದ್ದಿಗಳು…

ನೀರಲ್ಲಿ ಮುಳುಗಿದ ಮಕ್ಕಳು “ಅಪ್ಪಾ… ಕಾಪಾಡು” ಎಂದು ಕರೆದರೂ ಕಾಪಾಡಲಾಗಲಿಲ್ಲ | ನೊಂದ ತಂದೆಯಿಂದ ಆತ್ಮಹತ್ಯೆ

ಹೇಯ ಕೃತ್ಯ: 6 ವರ್ಷದ ಮಗುವಿನ ಮೇಲೆ ಚಿಕ್ಕಪ್ಪನಿಂದಲೇ ಲೈಂಗಿಕ ದೌರ್ಜನ್ಯ

ಹೃದಯ ವಿದ್ರಾವಕ ಘಟನೆ: ವಾಕಿಂಗ್ ಗೆ ಹೋಗಿದ್ದ ತಾಯಿ ಮಗ ಇಬ್ಬರೂ ಹೊಳೆಗೆ ಬಿದ್ದು ದಾರುಣ ಸಾವು

ಆನ್ ಲೈನ್ ಗೆಳೆಯನ ಭೇಟಿಗೆ ತೆರಳಿದ ಯುವತಿಗೆ ಡ್ರಗ್ಸ್ ನೀಡಿ, ಐದು ಮಂದಿಯಿಂದ ಸಾಮೂಹಿಕ ಅತ್ಯಾಚಾರ!

ದೇವಸ್ಥಾನ ತೆರವು: ಹಿಂದೂ ಭಾವನೆಗಳ ವಿರುದ್ಧದ ಕೃತ್ಯ ಎಂದ ಸಿದ್ದರಾಮಯ್ಯ

ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ | ನಟ ಚೇತನ್

ಯಡಿಯೂರಪ್ಪ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಜರಾತ್ ಸಿಎಂ ವಿಜಯ್ ರೂಪಾನಿ!

ಇತ್ತೀಚಿನ ಸುದ್ದಿ

Exit mobile version