ಸನಾತನ ಧರ್ಮಕ್ಕೆ ಆರ್ ಎಸ್ ಎಸ್ ನಿಂದ ಅಪಾಯವಿದೆ: ಬಿ.ಕೆ.ಹರಿಪ್ರಸಾದ್
ಮಂಗಳೂರು: ಐದು ಸಾವಿರ ವರ್ಷಗಳ ಇತಿಹಾಸವಿರುವ ಸನಾತನ ಧರ್ಮಕ್ಕೆ ಆರ್ ಎಸ್ ಎಸ್ ನಿಂದ ಅಪಾಯವಿದೆ ಎಂದು ವಿಧಾನ ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಏನು ಅನ್ನುವುದು ಕೇರಳದಲ್ಲಿ ಗೊತ್ತಾಗಿದೆ. ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ಕಾಶ್ಮೀರದ ಕಥುವಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಆ ಪ್ರಕರಣದ ಆರೋಪಿಯ ಪರ ಬಿಜೆಪಿ ಮಂತ್ರಿಗಳು ನಿಂತಿದ್ದರು. ನಾವು ಆರ್ ಎಸ್ ಎಸ್ ನಿಂದ ಕಲಿಯಲು ಏನೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ದೇಶದ್ರೋಹಿ ಹೇಳಿಕೆ:
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜನಗಣಮನ ರಾಷ್ಟ್ರಗೀತೆ ಅಲ್ಲ ಎಂದು ಹೇಳಿಕೆ ನೀಡಿರುವುದು ದೇಶದ್ರೋಹದ ಹೇಳಿಕೆಯಾಗಿದೆ. ಅವರ ಮೇಲೆ ಕೇಸು ದಾಖಲಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























